Advertisement

ಕೋವಿಡ್ ಕಳವಳ-ಆಗಸ್ಟ್ 18: 7665 ಹೊಸ ಪ್ರಕರಣ ; 8387 ಡಿಸ್ಚಾರ್ಜ್ ; 139 ಸಾವು

10:39 PM Aug 18, 2020 | Hari Prasad |

ಬೆಂಗಳೂರು: ಸೋಮವಾರ ಸಾಯಂಕಾಲದಿಂದ ಮಂಗಳವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7665 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

Advertisement

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8387 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 139 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 2ಲಕ್ಷದ 40 ಸಾವಿರದ ಗಡಿ ದಾಟಿದ್ದು, ನಮ್ಮಲ್ಲಿ ಒಟ್ಟು 2,40,948 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ ಒಂದೂವರೆ ಗಡಿಯನ್ನು ದಾಟಿರುವುದು ಆಶಾದಾಯಕ ವಿಷಯವಾಗಿದೆ. 1,56,949 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 79,782 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 4201 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 16 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 697 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2242 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಬಳ್ಳಾರಿ (673), ಉಡುಪಿ (421), ಬೆಳಗಾವಿ (395), ಮೈಸೂರು (357), ದಾವಣಗೆರೆ (332), ಶಿವಮೊಗ್ಗ (318), ದಕ್ಷಿಣ ಕನ್ನಡ (279), ಧಾರವಾಡ (279), ಕಲಬುರಗಿ (229), ಗದಗ (186), ಬಾಗಲಕೋಟೆ (171), ರಾಯಚೂರು (171), ಮಂಡ್ಯ (174), ಹಾಸನ (177), ಕೊಪ್ಪಳ (142), ರಾಮನಗರ (115), ಯಾದಗಿರಿ (107), ಹಾವೇರಿ (109), ಚಿಕ್ಕಮಗಳೂರು (145) ಮತ್ತು ಬೆಂಗಳೂರು ಗ್ರಾಮಾಂತರ (123) ಜಿಲ್ಲೆಗಳಿವೆ.

Advertisement

ಇನ್ನುಳಿದಂತೆ, ಬೀದರ್ (99), ಚಿಕ್ಕಬಳ್ಳಾಪುರ (82), ಉತ್ತರ ಕನ್ನಡ (80), ಕೋಲಾರ (71), ವಿಜಯಪುರ (64), ತುಮಕೂರು (46), ಚಿತ್ರದುರ್ಗ (41), ಚಾಮರಾಜನಗರ (21), ಕೊಡಗು (16) ಮತ್ತು ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 28,867 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 30,221 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 59,088 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 5,51,725 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 15,82,449 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 21,34,174 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next