ವಿಜಯಪುರ: ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ 77 ಜನರಲ್ಲಿ ಡೆಲ್ಟಾ ರೂಪಾಂತರಿ ವೈರಸ್ ದೃಢಪಟ್ಟಿದೆ.
ಕೋವಿಡ್ ಎರಡನೇ ಅಲೆಯ ವೇಳೆ ವಿಜಯಪುರ ಜಿಲ್ಲಾಡಳಿತ ಕೋವಿಡ್ ಸೋಂಕಿತ ಗರ್ಭಿಣಿಯರು, ಮಕ್ಕಳು, ಗಂಭೀರ ಸ್ಥಿತಿಯಲ್ಲಿದ್ದ 120 ರೋಗಿಗಳ ಗಂಟಲು ದ್ರವ, ಮಾದರಿಗಳನ್ನು ಸಂಗ್ರಹಿಸಿ ಬೆಂಗಳೂರು ಮೆಡಿಕಲ್ ಕಾಲೇಜಿನ ವೈರಾಲಜಿ ಲ್ಯಾಬ್ ಗೆ ಕಳುಹಿಸಲಾಗಿತ್ತು.
ಇದನ್ನೂ ಓದಿ:ಹೊಡೆದ್ರೆ ವಾಪಸ್ ಅದರಲ್ಲಿ ಹೊಡಿರಿ ಎಂದಿದ್ದು ತಪ್ಪಾ?: ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪ
ಕಳೆದ ಏಪ್ರಿಲ್, ಮೇ, ಜೂನ್ ತಿಂಗಳಲ್ಲಿ ಪ್ರಯೋಗಾಲಯಕ್ಕೆ ಕಳುಹಿಸಿದ್ದ ಗಂಟಲು ಮಾದರಿಯ ವರದಿ ಜುಲೈ ಕೊನೆಯ ವಾರದಲ್ಲಿ ಪ್ರಯೋಗಾಲಯದ ವರದಿ ಜಿಲ್ಲಾಡಳಿತಕ್ಕೆ ಲಭ್ಯವಾಗಿದೆ.
ಪ್ರಯೋಗಾಲಯಕ್ಕೆ ಕಳುಹಿಸಿದ 120 ಮಾದರಿಗಳಲ್ಲಿ 77 ಜನರಲ್ಲಿ ಡೆಲ್ಟಾ ರೂಪಾಂತರಿ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಸುನೀಲ್ ಕುಮಾರ ಮಾಹಿತಿ ನೀಡಿದ್ದಾರೆ.