Advertisement

ಪ್ರವಾಹಕ್ಕೆ 77 ಸಾವಿರ ಹೆಕ್ಟೇರ್‌ ಬೆಳೆಹಾನಿ

06:17 PM Nov 24, 2020 | Suhan S |

ಯಾದಗಿರಿ: ಜಿಲ್ಲೆಯಲ್ಲಿ ಜುಲೈ ತಿಂಗಳಿಂದ ಅಕ್ಟೋಬರ್‌ ತಿಂಗಳವರೆಗೆ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ 77 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಷ್ಟವಾಗಿದ್ದು, 88 ಸಾವಿರ ರೈತರಿಗೆ ಇದರಿಂದ ಹಾನಿ ಸಂಭವಿಸಿದೆ ಎಂದು ಬೀದರ ಮತ್ತು ಯಾದಗಿರಿ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ತಿಳಿಸಿದರು.

Advertisement

ಸೋಮವಾರ ಜಿಪಂ ಸಭಾಂಗಣದಲ್ಲಿ ಪ್ರವಾಹ ಹಾಗೂ ಅತಿವೃಷ್ಟಿಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ವಾಡಿಕೆಗಿಂತ ಈ ಭಾರಿ ಹೆಚ್ಚಿನ ಮಳೆಯಾಗಿದ್ದು, ಮಹಾರಾಷ್ಟ್ರದಲ್ಲಿ ಸಂಭವಿಸಿದ ಪ್ರವಾಹವು ಜಿಲ್ಲೆಯಲ್ಲಿಯೂ ಹಾನಿಯುಂಟು ಮಾಡಿದೆ. ಜಿಲ್ಲೆಯಲ್ಲಿ 69 ಕೋಟಿ ರೂ.ಗಳ ಬೆಳೆಹಾನಿಗೆ ಪರಿಹಾರ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಬಗ್ಗೆ ತಯಾರಿಸಿದ ಜಂಟಿ ಸಮೀಕ್ಷೆಯ ವರದಿ ಪ್ರಕಾರ 69 ಕೋಟಿ ಹಾನಿಯಾಗಿರುವುದನ್ನು ಪತ್ತೆ ಮಾಡಲಾಗಿದೆ ಎಂದರು.

ಪ್ರವಾಹದಿಂದ ಜಿಲ್ಲೆಯ ರೋಜಾ ಹಾಗೂ ಶಿವನೂರು ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು. ಅಧಿ ಕಾರಿಗಳು ಪ್ರವಾಹ ಹಾಗೂ ಭಾರಿ ಮಳೆಯಿಂದ ಸಂತ್ರಸ್ತರಾದವರಿಗೆ ಧೈರ್ಯ ತುಂಬಿ ಅವರಿಗೆಪರಿಹಾರ ಕಲ್ಪಿಸಿಕೊಡಬೇಕು. ಪ್ರವಾಹ ಹಾಗೂ ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಪರಿಹಾರ ಕಲ್ಪಿಸಲು ಜಿಲ್ಲೆಯಲ್ಲಿ ಪ್ರವಾಹಹಾಗೂ ಅತಿವೃಷ್ಟಿಗೆ ಹಾನಿಗೊಳಗಾದ ಎಲ್ಲಾ ತಾಲ್ಲೂಕುಗಳಲ್ಲಿಯೂ ತಾರತಮ್ಯವಿಲ್ಲದೆ ಪರಿಹಾರದ ಮೊತ್ತ ಹಾಗೂ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲೆಯ ರೈತರ ಒತ್ತಾಸೆಯಂತೆ ಬೆಂಬಲ ಬೆಲೆ ಯೋಜನೆಯಡಿರೈತರಿಂದ 100 ಕ್ವಿಂಟಲ್‌ ಭತ್ತ ಖರೀದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಯಾದಗಿರಿಯ ಬ್ರಿಜ್‌ ಕಂ ಬ್ಯಾರೇಜ್‌ ಗಳಿಗೆ ಹೊಸ ಗೇಟ್‌ಗಳನ್ನು ಅಳವಡಿಸುವ ಕಾರ್ಯ ತುರ್ತಾಗಿ ಮಾಡಬೇಕು. ಈ ಹಿಂದೆ ಅನಾಹುತ ಸಂಭವಿಸಿದ್ದು, ಕೃಷ್ಣ ಭಾಗ್ಯ ಜಲ ನಿಗಮದ ಅಧಿಕಾರಿ ಶಿವಾಜಿ ಈ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಡಾ| ರಾಗಪ್ರಿಯ. ಆರ್‌ ಮಾತನಾಡಿ,ಜಿಲ್ಲೆಯಲ್ಲಿ ಭಾರಿ ಮಳೆಯಾಗಿ ಲೋಕೋಪಯೋಗಿ ವ್ಯಾಪ್ತಿಯ ರಾಜ್ಯ ಹೆದ್ದಾರಿ 56 ಕಿ.ಮೀ, ಜಿಲ್ಲಾ ಮುಖ್ಯರಸ್ತೆ 260 ಕಿ.ಮೀ,ಸೇತುವೆಗಳು 105 ಹಾನಿಯಾಗಿದ್ದು, ಒಟ್ಟಾರೆ 170 ಕೋಟಿ ರೂ.ಗಳ ಹಾನಿ ಸಂಭವಿಸಿದೆ. ಇದೀಗ ಸರ್ಕಾರದಿಂದ 10 ಕೋಟಿ ಬಿಡುಗಡೆಯಾಗಿದ್ದು 34 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.ಬೆಳೆಹಾನಿಗೆ ಸಂಬಂಧಿಸಿದಂತೆ ಹಂತ ಹಂತವಾಗಿ ಪರಿಹಾರ ಧನ ಬಿಡುಗಡೆಯಾಗಲಿದ್ದು, ಈ ವರೆಗೆ 3.52 ಕೋಟಿ. ರೂ.ಗಳು ಬಿಡುಗಡೆಯಾಗಿದ್ದು, 5,300 ರೈತರಿಗೆ ಅವರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗಿದೆ ಎಂದರು.

Advertisement

ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ, ವೆಂಕಟರೆಡ್ಡಿಗೌಡ ಮುದ್ನಾಳ, ಜಿಪಂ ಅಧ್ಯಕ್ಷ ಶಿವನಗೌಡ ಬಸನಗೌಡ ಯಡಿಯಾಪುರ, ಬಸವರಾಜ ಚಂಡ್ರಿಕಿ, ಜಿಪಂ ಸಿಇಒ ಶಿಲ್ಪಾ ಶರ್ಮಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next