Advertisement

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಕಳೆದ ವರ್ಷ 772ಕೋಟಿ ನೆರವು

02:53 PM Aug 25, 2022 | Team Udayavani |

ಕಲಬುರಗಿ: ಪಿಎಂ-ಕಿಸಾನ್‌ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಆರ್ಥಿಕ ಸೌಲಭ್ಯ ಪಡೆಯಲು ಬಯೋಮೆಟ್ರಿಕ್‌ ಆಧಾರಿತ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಆಗಸ್ಟ್‌ 31ರೊಳಗೆ ಕೆವೈಸಿ ಮಾಡಿಸುವಂತೆ ಜಿಲ್ಲೆಯ ರೈತರಲ್ಲಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್‌ಮನವಿ ಮಾಡಿದರು.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪಿಎಂ ಕಿಸಾನ್‌ ಯೋಜನೆಯಡಿ ಜಿಲ್ಲೆಯಲ್ಲಿ ನೋಂದಣಿಯಾದ 2,68,015 ರೈತರ ಪೈಕಿ 99,545 ರೈತರು ಮಾತ್ರ ನೋಂದಣಿ ಮಾಡಿದ್ದಾರೆ. ಉಳಿದ ರೈತರು ನಿಗದಿತ ಅವಧಿಯಲ್ಲಿ “ಗ್ರಾಮ ಒನ್‌’ ಅಥವಾ ನಾಗರಿಕ ಸೇವಾ ಕೇಂದ್ರಗಳ ಮೂಲಕ ಕೆವೈಸಿ ಮಾಡಿಕೊಳ್ಳದಿದ್ದಲ್ಲಿ ಅಂತಹ ರೈತರಿಗೆ ಆರ್ಥಿಕ ಸೌಲಭ್ಯ ದೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಕಳೆದ ವರ್ಷ ಈ ಯೋಜನೆಯಡಿ ರೈತರಿಗೆ 772ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ ಎಂದರು.

ಪ್ರಸಕ್ತ 2022-23ನೇ ಸಾಲಿಗೆ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಯಡಿ 2,14,749ರೈತರು ದಾಖಲೆ ಪ್ರಮಾಣದಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಸ್ಥಳೀಯ ನಿರ್ದಿಷ್ಟ ವಿಕೋಪದಡಿ 40,527ರೈತರು ದೂರು ನೀಡಿರುವ ಹಿನ್ನೆಲೆಯಲ್ಲಿ 24,551ರೈತರ ಹೊಲದಲ್ಲಿ ಜಂಟಿ ಸಮೀಕ್ಷೆ ನಡೆಸಿದ್ದು, 16,476ರೈತರ ಬೆಳೆಗಳು ಸಮೀಕ್ಷೆಗೆ ಬಾಕಿ ಇವೆ. ಮಳೆ ಬಿದ್ದ ನಂತರ 72ಗಂಟೆ ಒಳಗಾಗಿ ರೈತರು ಟೋಲ್‌ ಫ್ರೀ ಸಂಖ್ಯೆ 100-200-5142ಗೆ ಕರೆ ಮಾಡಿ ದೂರು ನೀಡಿದಲ್ಲಿ ವಿಮಾ ಕಂಪನಿಯವರು ಸಮೀಕ್ಷೆಗೆ ಬರುತ್ತಾರೆ. ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಜಿಲ್ಲಾ ಕೇಂದ್ರದಲ್ಲಿ ಕಾಲ್‌ ಸೆಂಟರ್‌ ತೆರೆಯಲಾಗುವುದು. ಕಳೆದ ವರ್ಷ ಈ ವಿಮೆ ಯೋಜನೆಯಡಿ ಜಿಲ್ಲೆಯ ಒಂಭತ್ತು ಸಾವಿರ ಜನರಿಗೆ ಪರಿಹಾರ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಕೃಷಿ ಉಪನಿರ್ದೇಶಕ ಸಮದ್‌ ಪಟೇಲ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next