Advertisement

ಅಲೆಮಾರಿಗಳ ಅಭಿವೃದ್ಧಿಗೆ 78 ಕೋಟಿ

09:36 PM Mar 05, 2020 | Lakshmi GovindaRaj |

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಈ ಬಾರಿಯ ಬಜೆಟ್‌ ನಲ್ಲಿ “ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ’ ವಲಯದಡಿ ಪರಿಶಿಷ್ಟ ಜಾತಿ, ಹಿಂದುಗಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ “ಸರ್ವೋದ ಯದ’ ಸೂತ್ರ ರೂಪಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಅಲೆ ಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 78 ಕೋಟಿ ರೂ.ಅನುದಾನ ಮೀಸಲಿಟ್ಟಿದ್ದಾರೆ.

Advertisement

ಅಲ್ಲದೆ, ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ 200 ಕೋಟಿ ರೂ.ಅನುದಾನ ಮೀಸಲಿಟ್ಟಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಐದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲು ಯೋಜನೆ ರೂಪಿಸಿದ್ದಾರೆ.

ರಾಜ್ಯ ಬಜೆಟ್‌ನ್ನು ಎಫ್ಕೆಸಿಸಿಐ ಸ್ವಾಗತಿಸುತ್ತದೆ. ರೈತರನ್ನು ಗಮನದಲ್ಲಿಟ್ಟುಕೊಂಡು ಹೊಸ ಕೃಷಿ ನೀತಿಯನ್ನು ಪ್ರಕಟಿಸುವುದರ ಜತೆಗೆ ಸಾವಯವ ಕೃಷಿಗೆ ಆದ್ಯತೆ ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲಾಗಿದೆ. ಪ್ರವಾಸೋದ್ಯಮ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಬಜೆಟ್‌ ಪೂರಕವಾಗಿದೆ.
-ಸಿ.ಆರ್‌.ಜನಾರ್ಧನ, ಎಫ್ಕೆಸಿಸಿಐ ಅಧ್ಯಕ್ಷ

ಯಡಿಯೂರಪ್ಪ ಅವರು ಮಂಡಿಸಿದ ಬಜೆಟ್‌ ಸಮತೋಲನದಿಂದ ಕೂಡಿದ್ದು, ಸಣ್ಣ ಕೈಗಾರಿಕೆಗಳಿಗೆ ಆದ್ಯತೆ ನೀಡಲಾಗಿದೆ. ಬೆಂಗಳೂರಿನ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಕಾಸಿಯಾ ಸೆಂಟರ್‌ ಆಫ್ ಎಕ್ಸಲೆನ್ಸ್‌ಗಾಗಿ 20 ಕೋಟಿ ರೂ.ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಅದನ್ನು ಬಿಡುಗಡೆ ಮಾಡುತ್ತಾರೆ ಎಂಬ ಆಶಾಭಾವನೆ ಇದೆ.
-ಆರ್‌. ರಾಜು, ಕಾಸಿಯಾ ಅಧ್ಯಕ್ಷ

ರೈತರು ಹಾಗೂ ಗ್ರಾಮೀಣ ಪ್ರದೇಶವನ್ನು ಕಡೆಗಣಿಸಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ನಗರಾಭಿವೃದ್ಧಿಗೆ ಶೇ.11ರಷ್ಟು ಮೀಸಲಿಟ್ಟಿದ್ದಾರೆ. ಕೃಷಿ ಮತ್ತು ತೋಟಗಾರಿಕೆಗೆ ಕೇವಲ ಶೇಕಡಾ 3ರಷ್ಟು ಮೀಸಲಿಟ್ಟಿದ್ದಾರೆ. ಇದು ಯಡಿಯೂರಪ್ಪ ಅವರಿಗೆ ರೈತರ ಮೇಲಿರುವ ಕಾಳಜಿ ಗೊತ್ತಾಗುತ್ತದೆ.
-ಸಚಿನ್‌ ಮೀಗಾ, ಕೆಪಿಸಿಸಿ ಕಿಸಾನ್‌ ಘಟಕದ ಅಧ್ಯಕ್ಷ

Advertisement

ನಾನು ಪ್ರಸ್ತಾಪಿಸಿದ್ದ ಹಲವು ಮಹತ್ತರ ಯೋಜನೆಗಳನ್ನು ಮುಖ್ಯಮಂತ್ರಿಗಳು ಪ್ರಕಟಿಸಿ¨ªಾರೆ. ಶೈಕ್ಷಣಿಕ ಗುಣಮಟ್ಟವನ್ನು ಉತ್ತಮ ಪಡಿಸಲು “ಶಿಕ್ಷಕ ಮಿತ್ರ’ ಎಂಬ ಮೊಬೈಲ್‌ ತಂತ್ರಾಂಶದ ಅಭಿವೃದ್ಧಿಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಪಠ್ಯಕ್ರಮದ ಕಲಿಕೆಯ ಹೊರೆಯನ್ನು ತಗ್ಗಿಸಿ ಶಿಕ್ಷಣವನ್ನು ವಿದ್ಯಾರ್ಥಿಕೇಂದ್ರಿತವಾಗಿಸಲು ಬ್ಯಾಗ್‌ ರಹಿತ ಸಂಭ್ರಮ ಶನಿವಾರವನ್ನು ಜಾರಿಗೆ ತಂದಿರುವುದು ಸಂತಸ ತಂದಿದೆ.
-ಎಸ್‌.ಸುರೇಶ್‌ ಕುಮಾರ್‌, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next