ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 78,512 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 36 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 971 ಜನರು ಕೋವಿಡ್ ಕಾರಣದಿಂದ ಪ್ರಾಣ ತ್ಯೆಜಿಸಿದ್ದು, ಒಟ್ಟು ಮೃತರ ಸಂಖ್ಯೆ 64,469ಕ್ಕೆ ಏರಿಕೆಯಾಗಿದೆ.
ಸುಮಾರು 27,74,802 ಜನರು ಈಗಾಗಲೇ ಗುಣಮುಖರಾಗಿದ್ದು, ದೇಶದಲ್ಲಿ ಚೇತರಿಕೆ ಪ್ರಮಾಣ 76.47% ಗೆ ಜಿಗಿದಿದೆ. ಮಾತ್ರವಲ್ಲದೆ ಸುಮಾರು 7,81,975 ಸಕ್ರೀಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ಮಾಡಿದೆ.
ಜಾಗತಿಕವಾಗಿ ಸುಮಾರು 2,53,76,442 ಜನರಿಗೆ ಸೋಂಕು ತಗುಲಿದ್ದು, 8,50,069 ಜನರು ಮೃತಪಟ್ಟಿದ್ದಾರೆ.
ಭಾರತದಲ್ಲಿ ಶನಿವಾರ ಅನ್ ಲಾಕ್-4 ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಸೆಪ್ಟೆಂಬರ್ 7ರಿಂದ ಮೆಟ್ರೋ ಟ್ರೈನ್ ಗಳು ಆರಂಭವಾಗಲಿದೆ. ಮಾತ್ರವಲ್ಲದೆ ರಾಜಕೀಯ, ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ 100 ಕ್ಕಿಂತ ಹೆಚ್ಚಿನ ಜನರು ಸೇರದಂತೆ ಸುತ್ತೋಲೆ ಹೊರಡಿಸಲಾಗಿದೆ. ಆರ್ಥಿಕ ಚಟುವಟಿಕೆಗಳು ಇದೀಗ ಗರಿಗೆದರಿದ್ದು, ಕಂಟೈನ್ ಮೆಂಟ್ ಝೋನ್ ಗಳಲ್ಲಿ ಲಾಕ್ ಡೌನ್ ಅನ್ನು ಸೆಪ್ಟೆಂಬರ್ 30ರವರೆಗೂ ಮೂಮದುವರೆಸಲಾಗಿದೆ.