ಬೆಂಗಳೂರು: ಮಂಗಳವಾರ ಸಾಯಂಕಾಲದಿಂದ ಬುಧವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7883 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7034 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 113 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 2ಲಕ್ಷದ ಗಡಿಯನ್ನು ಸಮೀಪಿಸಿದ್ದು, 1,96,494ಕ್ಕೆ ಏರಿಕೆಯಾಗಿದೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ ಲಕ್ಷದ ಗಡಿಯನ್ನು ದಾಟಿರುವುದು ಆಶಾದಾಯಕ ವಿಷಯವಾಗಿದೆ. 1,12,633 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 80,343 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.
ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 3510 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 701 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2802 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಬಳ್ಳಾರಿ (635), ಮೈಸೂರು (544), ಬೆಳಗಾವಿ (304), ಧಾರವಾಡ (269), ಉಡುಪಿ (263), ಹಾಸನ (258), ದಾವಣಗೆರೆ (239), ದಕ್ಷಿಣ ಕನ್ನಡ (229), ಕೊಪ್ಪಳ (202), ರಾಯಚೂರು (191), ಬೆಂಗಳೂರು ಗ್ರಾಮಾಂತರ (182), ಬಾಗಲಕೋಟೆ (170), ಗದಗ (148), ಕಲಬುರಗಿ (144), ಹಾವೇರಿ (132), ವಿಜಯಪುರ (121), ಮಂಡ್ಯ (121), ತುಮಕೂರು (121), ಚಿಕ್ಕಮಗಳೂರು (112) ಮತ್ತು ಯಾದಗಿರಿ (107) ಜಿಲ್ಲೆಗಳಿವೆ.
ಇನ್ನುಳಿದಂತೆ, ಬೀದರ್ (91), ಉತ್ತರ ಕನ್ನಡ (84), ಚಿಕ್ಕಬಳ್ಳಾಪುರ (81), ಶಿವಮೊಗ್ಗ (69), ಚಾಮರಾಜನಗರ (68), ರಾಮನಗರ (63), ಚಿತ್ರದುರ್ಗ (61), ಕೋಲಾರ (33) ಮತ್ತು ಕೊಡಗು (29) ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಇಂದು ರಾಜ್ಯದಲ್ಲಿ ಒಟ್ಟು 26,076 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 27,250 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ.
ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 53,326 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 4,07,568 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 14,18,749 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 18,26,317 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.