Advertisement
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6940 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 104 ಸೋಂಕಿತರು ಮೃತಪಟ್ಟಿದ್ದಾರೆ.
Related Articles
Advertisement
ಇನ್ನುಳಿದಂತೆ, ಬೀದರ್ (97), ಉತ್ತರ ಕನ್ನಡ (87), ರಾಮನಗರ (87), ಕೋಲಾರ (81), ಚಿತ್ರದುರ್ಗ (77), ಚಾಮರಾಜನಗರ (61), ಕೊಡಗು (60), ಚಿಕ್ಕಬಳ್ಳಾಪುರ (42) ಮತ್ತು ಬೆಂಗಳೂರು ಗ್ರಾಮಾಂತರ (39), ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಇಂದು ರಾಜ್ಯದಲ್ಲಿ ಒಟ್ಟು 29,422 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 27,216 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 56,638 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 4,64,286 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 14,74,668 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 19,38,954 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 84,185ಕ್ಕೆ ಏರಿಕೆಯಾಗಿದ್ದು, 49,392 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 33,432ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 1360 ಸಾವು ಸಂಭವಿಸಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 13,048 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 6948 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 5952 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 148 ಸಾವು ಸಂಭವಿಸಿದೆ.
ಮೈಸೂರು ಜಿಲ್ಲೆಯಲ್ಲಿ 9280 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 5830 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3166 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 284 ಸಾವು ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 8373ಕ್ಕೆ ಏರಿಕೆಯಾಗಿದ್ದು ಇವರಲ್ಲಿ 6106 ಸೋಂಕಿತರು ಗುಣಮುಖರಾಗಿದ್ದಾರೆ. 2011 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 254 ಸಾವು ಸಂಭವಿಸಿದೆ. ಬೆಂಗಳೂರು ನಗರ (1360) ಹಾಗೂ ಮೈಸೂರು (284) ಜಿಲ್ಲೆಗಳ ಬಳಿಕ ಕೋವಿಡ್ 19 ಸಂಬಂಧಿ ಅತೀ ಹೆಚ್ಚಿನ ಸಾವು ಸಂಭವಿಸಿರುವ ಜಿಲ್ಲೆ ಇದಾಗಿದೆ.
ಕಲಬುರಗಿಯಲ್ಲಿ ಒಟ್ಟು 8351 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 6150 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 2042 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 159 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ 7496 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 4752 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 2667 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ 19 ಸೋಂಕು ಸಂಬಂಧಿ 77 ಸಾವಿನ ಪ್ರಕರಣಗಳು ದಾಖಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ 7147 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 4524 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2401 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 222 ಸಾವು ಸಂಭವಿಸಿದೆ.
ಬೆಳಗಾವಿ ಜಿಲ್ಲೆಯಲ್ಲಿ 6958 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3063 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3782 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 113 ಸಾವು ಸಂಭವಿಸಿದೆ.