ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ 10 ಸಾವಿರ ರೂ. ಮುಂಗಡ ನೀಡುವ ಬಗ್ಗೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಅದಕ್ಕೆ ಬಡ್ಡಿ ವಿಧಿಸದಿರಲೂ ಸರ್ಕಾರ ಇರಾದೆ ಹೊಂದಿದೆ. ಏಳನೇ ವೇತನ ಆಯೋಗದ ಶಿಫಾರಸಿನ ಅನ್ವಯ ಅದನ್ನು ಜಾರಿಗೊಳಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.
ಮುಂದಿನ ತಿಂಗಳು ಬಣ್ಣಗಳ ಹಬ್ಬ ಹೋಳಿಗೆ ಪೂರಕವಾಗಿ ಈ ಬಗ್ಗೆ ಘೋಷಣೆ ಹೊರ ಬೀಳುವ ಸಾಧ್ಯತೆ ಇದೆ. ಹಬ್ಬಕ್ಕೆ ಅನುಕೂಲವಾಗುವಂತೆ ನೌಕರರು ಬೇಕಾದ ವಸ್ತುಗಳನ್ನು ಖರೀದಿಸಲು ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ:ಮೈದಾನದಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವು : ಕ್ರಿಕೆಟ್ ಆಡುತ್ತಿದ್ದಾಗ ನಡೆದ ದುರ್ಘಟನೆ
ಈ ಮೂಲಕ ಸೋಂಕಿನಿಂದ ಚೇತರಿಸಿಕೊಳ್ಳುವ ದೇಶದ ಅರ್ಥ ವ್ಯವಸ್ಥೆಗೆ ಮತ್ತಷ್ಟು ಶಕ್ತಿ ತುಂಬುವುದು ಕೂಡ ಸರ್ಕಾರ ಉದ್ದೇಶವಾಗಿದೆ. ಕಳೆದ ವರ್ಷ ಕೂಡ ಇದೇ ರೀತಿಯ ನಿರ್ಧಾರ ಜಾರಿಗೊಳಿಸಲಾಗಿತ್ತು.