Advertisement

7ನೇ ವೇತನ ಆಯೋಗ ರಚನೆ: ಚರ್ಚಿಸಿ ಅಂತಿಮ-ಸಿಎಂ ಭರವಸೆ

09:19 PM Feb 17, 2022 | Team Udayavani |

ಬೆಂಗಳೂರು: ರಾಜ್ಯ ಸರಕಾರಿ ನೌಕರರ ವೇತನ ಮತ್ತು ಭತ್ತೆಗಳ ಪರಿಷ್ಕರಣೆಗೆ 7ನೇ ವೇತನ ಆಯೋಗ ರಚಿಸುವ ಬಗ್ಗೆ ಬಜೆಟ್‌ ಮಂಡನೆಗಿಂತ ಮೊದಲು ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು, ಸದ್ಯ 6ನೇ ವೇತನ ಆಯೋಗ ಚಾಲ್ತಿಯಲ್ಲಿದೆ. ಹೇಗಿದ್ದರೂ ಮುಂದಿನ ತಿಂಗಳು ಬಜೆಟ್‌ ಮಂಡಿಸಬೇಕಿದೆ. ಅದಕ್ಕೂ ಮೊದಲು ಆರ್ಥಿಕ ಪರಿಸ್ಥಿತಿ ಗಮನಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ 2022-23ನೇ ಸಾಲಿನಲ್ಲಿ 7ನೇ ವೇತನ ಆಯೋಗ ರಚಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

45 ಸಾವಿರ ಹುದ್ದೆ ಭರ್ತಿಗೆ ಕ್ರಮ :

ಕಳೆದ ಹಲವಾರು ವರ್ಷಗಳಿಂದ ಆಗಾಗ ಜಾರಿಗೆ ತರಲಾದ ಆರ್ಥಿಕ ನಿರ್ಬಂಧಗಳ ಪರಿಣಾಮ ಹುದ್ದೆಗಳ ಭರ್ತಿ ಆಗಿರಲಿಲ್ಲ. ಕೋವಿಡ್‌ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಆರ್ಥಿಕ ಹಿಂಜರಿಕೆ ಎದುರದಾರ ಪರಿಣಾಮ ಹುದ್ದೆಗಳ ನೇಮಕಾತಿ ಸ್ಥಗಿತಗೊಂಡಿತ್ತು. ಆದರೆ, ಆರ್ಥಿಕ ಇತಿಮಿತಿಯೊಳಗೆ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, 16 ಸಾವಿರ ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. 16 ಸಾವಿರ ಪೊಲೀಸ್‌ ಹುದ್ದೆಗಳ ಭರ್ತಿ ಚಾಲ್ತಿಯಲ್ಲಿದೆ. ಕಲ್ಯಾಣ ಕರ್ನಾಟಕ ಭಾಗದ ವಿವಿಧ ಇಲಾಖೆಗಳಲ್ಲಿನ 14 ಸಾವಿರ ಹುದ್ದೆಗಳು ತುಂಬಲಾಗುತ್ತಿದೆ ಎಂದು ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next