Advertisement

2023-24ನೇ ಸಾಲಿನಲ್ಲೇ 7ನೇ ವೇತನ ಆಯೋಗ ಜಾರಿಗೆ: ಸಿಎಂ ಬೊಮ್ಮಾಯಿ

10:38 AM Feb 28, 2023 | Team Udayavani |

ಹುಬ್ಬಳ್ಳಿ: ಸರಕಾರಿ ನೌಕರರಿಗೆ 7 ನೇ ವೇತನ ಆಯೋಗ ನೀಡಲು ಹಣ ತೆಗದಿರಿಸಿದ್ದೇವೆ. ಮಧ್ಯಂತರ ವರದಿ ಸಿದ್ದಪಡಿಸುತ್ತಿದ್ದೇವೆ. ವರದಿ ಬಂದ ಕೂಡಲೇ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಮಂಗಳವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, 7 ನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಹಣ ಮೀಸಲಿರಿಸಿದ್ದು, 2023-24 ನೇ ಸಾಲಿನಲ್ಲೇ ಜಾರಿಗೆ ತರಲಾಗುವುದು. ಈ ಕುರಿತು ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. ನೌಕರರ ಬೇಡಿಕೆಗಳನ್ನು ಈಡೇರಿಸಲು ಸಿದ್ದರಿರುವುದಾಗಿ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ ಶಾ ಸೇರಿದಂತೆ ಅನೇಕ ನಾಯಕರು ರಾಜ್ಯಕ್ಕೆ ಬರುತ್ತಿರುವುದರಿಂದ ಕಾಂಗ್ರೆಸ್ ನಾಯಕರು ಹತಾಷೆಗೊಂಡಿದ್ದಾರೆ. ಭ್ರಮನಿರಸಗೊಂಡಿರುವ ಸಿದ್ದರಾಯಮಯ್ಯ ಅವರು ಬೇಕಾ ಬಿಟ್ಟಿಯಾಗಿ ಹೇಳಿಕೆ ನೀಡುತ್ತಿದ್ದಾರೆ. ಪ್ರಧಾನಿ, ಗೃಹಸಚಿವರಿಗೆ ಚುನಾವಣೆ ಏಜೆಂಟ್ ಎಂದು ಹಗುರವಾಗಿ ಮಾತನಾಡುವುದು ಮಾಜಿ ಮುಖ್ಯಮಂತ್ರಿಯಾದವರಿಗೆ ಶೋಭೆಯಲ್ಲ. ರಾಜ್ಯಕ್ಕೆ ರಾಹುಲ್ ಗಾಂಧಿ ಹಾಗೂ ಇತರರು ಬಂದು ಹೋಗುತ್ತಿದ್ದಾರೆ. ಹಾಗಾದರೆ ಅವರು ಚುನಾವಾಣ ಏಜೆಂಟರಾ ಎಂದು ಪ್ರಶ್ನಿಸಿದರು. ಈಗಾಗಲೇ ಪಕ್ಷ ಬಲವರ್ಧನೆ ನಡೆಯುತ್ತಿದೆ. ಮೋದಿ, ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಮತ್ತೆ ಬರುತ್ತಾರೆ ಎಂದರು.

ಇದನ್ನೂ ಓದಿ:ಸೋಲಿನ ಬಾಯಿಂದ ಜಯ ಕಸಿದ ಕಿವೀಸ್; ಟೆಸ್ಟ್ ಪಂದ್ಯದಲ್ಲಿ ಒಂದು ರನ್ ಅಂತರದ ರೋಚಕ ಜಯ

ಮಾಜಿ ಸಿಎಂ ಎಚ್.ಡಿ.ಕೆ. ರಾಜಕೀಯ ನಿವೃತ್ತಿ ವಿಚಾರವನ್ನು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅವರದ್ದು ಇನ್ನೂ ನಿವೃತ್ತಿಯಾಗುವ ವಯಸ್ಸಲ್ಲ. ಇನ್ನೂ ಸೇವೆ ಮಾಡಬೇಕಿದೆ. ಚುನಾವಣೆ ಸಂದರ್ಭದಲ್ಲಿ ಇಂಥವೆಲ್ಲ ನಡೆಯುತ್ತಿರುತ್ತದೆ. ಜನ ಪ್ರಬುದ್ಧರಾಗಿದ್ದು, ಎಲ್ಲವನ್ನೂ ಗಮನಿಸುತ್ತಾರೆ. ಚುನಾವಣೆಯಿಂದ ಚುನಾವಣೆಗೆ ಇನ್ನೂ ಪ್ರಬುದ್ಧರಾಗಿದ್ದಾರೆ. ನಾವು ಮಾತನಾಡುವಾಗ ಅದರ ಹಿಂದಿರುವ ಕಲ್ಪನೆಯೂ ಇರಬೇಕು ಎಂದರು.

Advertisement

ಬನವಾಸಿಯಲ್ಲಿ ಸಿಎಂ ಗೋ ಬ್ಯಾಕ್ ವಿಚಾರಕ್ಕೆ ಮಾತನಾಡಿ, ನಾಲ್ಕು ಮಂದಿ ಗೋ ಬ್ಯಾಕ್ ಅಂದ್ರೆ ತಲೆಕೆಡಿಸಿಕೊಳ್ಳಲ್ಲ. ಗೋ ಬ್ಯಾಕ್ ಅಭಿಯಾನ ಮಾಮೂಲಿಯಾಗಿದೆ ಎಂದರು.

ಯಡಿಯೂರಪ್ಪ ಅವರು ಜೈಲಿನಲ್ಲಿದ್ದಾಗ ಯಡಿಯೂರಪ್ಪ ಡೈರಿ ಬರೆದ ವಿಚಾರವಾಗಿ ಅವರ ಮಗಳು ಡೈರಿ ಬಿಡುಗಡೆ ಮಾಡುವುದು ನನಗೆ ಗೊತ್ತಿಲ್ಲ ಎಂದ ಸಿಎಂ,  ಹಿರಿಯ ನಾಯಕರ ಕಾಲಿಗೆ ಬಿದ್ದಿದ್ದರೆ ನಾನೂ ಸಿಎಂ ಆಗುತ್ತಿದ್ದೆ ಎಂಬ ಯತ್ನಾಳ್ ಹೇಳಿಕೆ ವಿಚಾರಗಳಿಗೆ ಪ್ರತಿಕ್ರಿಯಿಸಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next