Advertisement

ದ.ಕ.: 8-10ನೇ ತರಗತಿ ಸೆ. 17ಕ್ಕೆ‌ ಆರಂಭ

11:48 PM Sep 13, 2021 | Team Udayavani |

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೆ. 17ರಿಂದ 8, 9 ಮತ್ತು 10ನೇ ತರಗತಿ ಹಾಗೂ ಸೆ. 20ರಿಂದ 6 ಮತ್ತು 7ನೇ ತರಗತಿಗಳನ್ನು ಆರಂಭಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ. ಇದೇ ವೇಳೆ ಪ್ರಥಮ ಪಿಯುಸಿ ತರಗತಿಗಳು ಕೂಡ ಶೀಘ್ರ ಆರಂಭವಾಗುವ ಸಾಧ್ಯತೆಯಿದೆ.

Advertisement

ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯುವ ಬಗ್ಗೆ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್‌ ನಿಯಮ ಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು ಹಾಗೂ ಮಕ್ಕಳಿಗೆ ತೊಂದರೆಯಾಗದಂತೆ ಅಧಿಕಾರಿ ಗಳು ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ ಶೇ. 99ರಷ್ಟು ಶಾಲಾ ಶಿಕ್ಷಕರು ಮತ್ತು ಸಿಬಂದಿಗೆ ಲಸಿಕೆ ನೀಡಲಾಗಿದ್ದು, ಕೋವಿಡ್‌ ಪರೀಕ್ಷೆಗಳನ್ನು ಹೆಚ್ಚಾಗಿ ನಡೆಸಬೇಕು ಎಂದರು.

ಜಿಲ್ಲೆಯಲ್ಲಿ 261 ಮಕ್ಕಳು ಕೋವಿಡ್‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಕ್ಕಳಲ್ಲಿ ಕೋವಿಡ್‌ ಲಕ್ಷಣ ಕಂಡುಬಂದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು ಹಾಗೂ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೂ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು ಎಂದರು.

ವಿದ್ಯಾರ್ಥಿಗಳು ಮಾಸ್ಕ್ ಧರಿಸಲೇಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಶಿಕ್ಷಕರು ಸೂಕ್ತ ಮಾಹಿತಿ ನೀಡಬೇಕು. ಜತೆಗೆ ಮಕ್ಕಳಲ್ಲಿ ಶುಲ್ಕ ಪಾವತಿಸಲು ಒತ್ತಾಯಿಸಬಾರದು. ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ, ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.

Advertisement

ಪೋಷಕರ ಅನುಮತಿ ಅಗತ್ಯ:

ಭೌತಿಕ ತರಗತಿ ಆರಂಭದ ಬಳಿಕವೂ ಆನ್‌ಲೈನ್‌ ತರಗತಿಗಳನ್ನು ಮುಂದು ವರಿಸಬೇಕು. ಭೌತಿಕ ತರಗತಿಗೆ ಹಾಜ ರಾಗುವ ಸಂಬಂಧ ಪೋಷಕರ ಅನು ಮತಿಯನ್ನು ಕಡ್ಡಾಯವಾಗಿ ತೆಗೆದು ಕೊಳ್ಳಬೇಕು ಎಂದರು.

ಕೇರಳದಿಂದ ಬರುವ ಮಕ್ಕಳಿಗೆ ವಿದ್ಯಾರ್ಥಿ ನಿಲಯಗಳಲ್ಲಿ ಉಳಿದು ಕೊಳ್ಳು ವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದಲ್ಲಿ ಆನ್‌ಲೈನ್‌ ಮೂಲಕ ತರಗತಿಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಎನ್‌. ಮಾಣಿಕ್ಯ (ಪ್ರಭಾರ), ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಕಿಶೋರ್‌, ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ, ಖಾಸಗಿ ಶಾಲಾ ಅಸೋಸಿಯೇಶನ್‌ನ ಮುಖ್ಯಸ್ಥರು, ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು  ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

1ರಿಂದ 5 ಸದ್ಯಕ್ಕಿಲ್ಲ  :

1ರಿಂದ 5ನೇ ತರಗತಿ ಆರಂಭಿಸುವ ಕುರಿತು ಇನ್ನೂ ತೀರ್ಮಾನವಾಗಿಲ್ಲ

ಉಡುಪಿಯಲ್ಲಿ  ಸದ್ಯವೇ ಆರಂಭ :

ಉಡುಪಿ: ಜಿಲ್ಲೆಯಾದ್ಯಂತ 1ರಿಂದ 5ನೇ ತರಗತಿ ಆರಂಭಿಸುವ ಚಿಂತನೆ ಇದ್ದು, ರಾಜ್ಯ ಸರಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಿದೆ. ಈಗಾಗಲೇ ಕೋವಿಡ್‌ ಪ್ರಕರಣಗಳು ಇಳಿಮುಖ ಆಗಿರುವುದಲ್ಲದೆ ವೀಕೆಂಡ್‌ ಕರ್ಫ್ಯೂವಿನಲ್ಲಿ ವಿನಾಯಿತಿ ಕಲ್ಪಿಸಿರುವುದರಿಂದ 1ರಿಂದ 5ನೇ ತರಗತಿಗಳನ್ನು ಆರಂಭಿಸಲು ಶೀಘ್ರ ಆದೇಶ ಹೊರಡಿಸುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next