Advertisement

ಶಹಾಬಾದ್‌ನಲ್ಲಿ ಮಾನ್ಪಡೆ ಸೇರಿ 8 ಮಂದಿ ಬಂಧನ-ಬಿಡುಗಡೆ

10:23 AM Nov 11, 2017 | |

ಶಹಾಬಾದ: ಟಿಪ್ಪು ಸುಲ್ತಾನ್‌ ಜಯಂತಿ ಸಾರ್ವಜನಿಕವಾಗಿ ಆಚರಿಸದಂತೆ ರಾಜ್ಯ ಸರ್ಕಾರದ ನಿಷೇಧಾಜ್ಞೆ ಜಾರಿಗೊಳಿಸಿದ್ದರೂ ಶುಕ್ರವಾರ ಟಿಪ್ಪು ಜಯಂತಿ ಆಚರಿಸಿದ್ದರಿಂದ ಸಿಪಿಐಎಂ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಸೇರಿದಂತೆ ಎಂಟು ಮುಖಂಡರನ್ನು ಪೊಲೀಸರು ಬಂಧಿಸಿ,
ತಹಶೀಲ್ದಾರ್‌ ಕಚೇರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.

Advertisement

ನಗರದಲ್ಲಿ ಸಾರ್ವಜನಿಕವಾಗಿ ಜಯಂತಿ ಆಚರಣೆ ಮಾಡದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ರೈತ ಮುಖಂಡ ಮಾರುತಿ ಮಾನ್ಪಡೆ ವಿರುದ್ಧ ಜಯಂತಿ ಮಾಡದಂತೆ ನೋಟಿಸ್‌ ಜಾರಿ ಮಾಡಲಾಗಿತ್ತು.

ಆದರೂ ಸಾರ್ವಜನಿಕವಾಗಿ ಟಿಪ್ಪು ಜಯಂತಿ ಆಚರಣೆ ಮಾಡೇ ಮಾಡ್ತಿವಿ ಎಂದು ಹೇಳಿಕೆ ನೀಡಿ, ಪೊಲೀಸರ
ಸರ್ಪಗಾವಲು ಮಧ್ಯೆಯೇ ನಗರದ ಮಡ್ಡಿ 1ರ ಮಗುªಮ್‌ ಭವನದ ಎಐಟಿಯುಸಿ ಕಚೇರಿಯಲ್ಲಿ ಶುಕ್ರವಾರ ಸಾರ್ವಜನಿಕವಾಗಿ ಟಿಪ್ಪು ಸುಲ್ತಾನ್‌ ಜಯಂತಿ ಆಚರಿಸಿದರು.

ಮಾಹಿತಿ ಅರಿತ ಪೊಲೀಸರು ಸ್ಥಳಕ್ಕೆ ಆಗಮಿಸಿ ಆಚರಣೆಯಲ್ಲಿ ಭಾಗಿಯಾದ ಮಾರುತಿ ಮಾನ್ಪಡೆ, ಶರಣಬಸಪ್ಪ
ಮಮಶಟ್ಟಿ, ಅಶೋಕ ಮ್ಯಾಗೇರಿ, ವಿರಯ್ನಾ ಸ್ವಾಮಿ, ಪಾಂಡುರಂಗ ಮಾವಿನ, ಸಿಪಿಐ ಮುಖಂಡ ಮೌಲಾಮುಲ್ಲಾ
ಸೇರಿದಂತೆ ಒಟ್ಟು ಎಂಟು ಜನರನ್ನು ವಶಕ್ಕೆ ಪಡೆದು ಪೊಲೀಸ್‌ ವಾಹನದಲ್ಲಿ ಠಾಣೆಗೆ ಕರೆದೊಯ್ಯಲಾಯಿತು. ನಂತರ ಚಿತ್ತಾಪುರ ತಹಶೀಲ್ದಾರ್‌ ಕಚೇರಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಸಾರ್ವಜನಿಕವಾಗಿ ಆಚರಿಸದಂತೆ ನಿಷೇಧಾಜ್ಞೆ ಜಾರಿ ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಬಿಜೆಪಿಗೆ ಹೆದರಿ ಸಾರ್ವಜನಿಕರಿಗೆ ಜಯಂತಿಗೆ ಅವಕಾಶ ನೀಡಿಲ್ಲ. ತಾಲೂಕು ಮಟ್ಟದಲ್ಲಿ ಜಯಂತಿ ಆಚರಣೆ ಮಾಡುತ್ತಿರುವುದು ಕೇವಲ ರಾಜಕಾರಣವಾಗಿದೆ. ಟಿಪ್ಪು ಒಬ್ಬ ದೇಶ ಪ್ರೇಮಿ, ಬ್ರಿಟಿಷರ ವಿರುದ್ಧ ಹೋರಾಟ ಮಾಡಿದಧಿಧೀರ. ಅವರ ದೇಶ ಸೇವೆ ಅರಿತು ನಾವು ಅವರ ಜಯಂತಿ ಆಚರಣೆಗೆ ಮುಂದಾಗಿದ್ದೇವೆ. ಯಾವುದೇ ರಾಜಕೀಯ ಉದ್ದೇಶವಿಲ್ಲ. ಆದರೂ ಜಯಂತಿ ಆಚರಣೆ ಹತ್ತಿಕ್ಕುವ ಸರ್ಕಾರದ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. 
ಮಾರುತಿ ಮಾನ್ಪಡೆ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ

Advertisement
Advertisement

Udayavani is now on Telegram. Click here to join our channel and stay updated with the latest news.

Next