Advertisement

Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

02:50 PM May 16, 2024 | Team Udayavani |

ಬೆಂಗಳೂರು: ಸಿಸಿಬಿಯ ಮಾದಕ ದ್ರವ್ಯನಿಗ್ರಹ ದಳದ ಅಧಿಕಾರಿಗಳು ಸಂಪಿಗೆಹಳ್ಳಿ, ವಿ.ವಿ. ಪುರಂ, ಕಾಟನ್‌ಪೇಟೆ ಹಾಗೂ ಕೊತ್ತನೂರು ಠಾಣೆ ವ್ಯಾಪ್ತಿಯ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

Advertisement

ನೈಜಿರಿಯಾದ ಆಗಸ್ಟಿನ್‌ ನಾನ್ಸೋ (39), ಉದ್ರಿಕ್‌ ಫೆಡಲೀಸ್‌ (34), ಎರೆಮನ್‌ ಸ್ಮಾರ್ಟ್‌ (40) ಹಾಗೂ ಸ್ಥಳೀಯ ಆರು ಮಂದಿ ಸೇರಿದಂತೆ ಒಟ್ಟು 8 ಮಂದಿಯನ್ನು ಬಂಧಿಸಲಾಗಿದೆ.

ಬಂಧಿತರಿಂದ 2.74 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬಂಧಿತರ ಪೈಕಿ ಮೂವರು ವಿದೇಶಿ ಪ್ರಜೆಗಳು ಸಂಪಿಗೆಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎಂಡಿ ಎಂಎ ಕ್ರಿಸ್ಟಲ್‌, ಕೊಕೇನ್‌ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ 50 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿ, ಮೂವರನ್ನು ಬಂಧಿಸಲಾಗಿದೆ.

ಆರೋಪಿಗಳು ಬ್ಯುಸಿನೆಸ್‌ ಹಾಗೂ ಮೆಡಿಕಲ್‌ ವೀಸಾ ಪಡೆದು ಭಾರತಕ್ಕೆ ಬಂದಿದ್ದಾರೆ. ಗೋವಾ, ಮುಂಬೈ ಹಾಗೂ ದೆಹಲಿಯಲ್ಲಿ ನೆಲೆಸಿದ್ದ ನೈಜೀರಿಯಾದ ಪ್ರಜೆಗಳಿಂದ ಮಾದಕ ವಸ್ತುಗಳನ್ನು ತಂದು ಬೆಂಗಳೂರಿನ ನಿರ್ದಿಷ್ಟ ಗ್ರಾಹಕರಿಗೆ ಪೂರೈಸುತ್ತಿದ್ದರು. ಎಂಡಿಎಂಎ ಕ್ರಿಸ್ಟಲ್‌ ಹಾಗೂ ಕೋಕೆನ್‌ನ್ನು 1 ಗ್ರಾಂಗೆ 10 ಸಾವಿರದಿಂದ 12 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಬಂದ ಹಣದಿಂದ ಮೋಜಿನ ಜೀವನ ನಡೆಸುತ್ತಿದ್ದರು. ಆರೋಪಿಗಳ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎನ್‌ ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

Advertisement

ಈ ಮೂವರ ಪೈಕಿ ಒಬ್ಬನ ವಿರುದ್ಧ ಸೈಬರ್‌ ಕ್ರೈಂ ಠಾಣೆಯಲ್ಲಿ ವಂಚನೆ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 28 ಐಟಿ ಕಾಯ್ದೆ ಅಡಿ ಕೇಸ್‌ ದಾಖಲಾಗಿವೆ ಎಂದು ಪೊಲೀಸ್‌ ಆಯುಕ್ತರು ಹೇಳಿದರು. ವಿವಿ ಪುರಂ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಒಬ್ಬ ಡ್ರಗ್‌ ಪೆಡ್ಲರ್‌ ಬಂಧಿಸಲಾಗಿದೆ.

ಈತನಿಂದ 10 ಲಕ್ಷ ರೂ. ಮೌಲ್ಯದ 5 ಕೆಜಿ ಗಾಂಜಾ, 7 ಎಲ್‌ಎಸ್‌ಟಿ ಸ್ಟ್ರಿಪ್ಸ್‌, 25 ಗ್ರಾಂ ಚರಸ್‌, 1 ಮೊಬೈಲ್‌ ಹಾಗೂ ಒಂದು ಕಾರನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಕಾಟನ್‌ ಪೇಟೆ ಠಾಣೆ ವ್ಯಾಪ್ತಿಯಲ್ಲಿ ಮತ್ತೂಬ್ಬ ಪೆಡ್ಲರ್‌ ಬಂಧಿಸಿದ್ದು, ಆತನಿಂದ 14 ಲಕ್ಷ ರೂ. ಮೌಲ್ಯದ 7 ಕೆ.ಜಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ. ಕೊತ್ತನೂರು ಠಾಣಾ ವ್ಯಾಪ್ತಿಯಲ್ಲಿ ಇನ್ನೊಬ್ಬ ಡ್ರಗ್ಸ್‌ ಪೆಡ್ಲರ್‌ ಬಂಧಿಸಿ, 2 ಕೋಟಿ ರೂ. ಮೌಲ್ಯದ 2 ಕೆ.ಜಿ ಹ್ಯಾಶಿಸ್‌ ಆಯಿಲ್, 716 ಚರಸ್‌ ಹಾಗೂ ಒಂದು ಮೊಬೈಲ್‌ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಆಯುಕ್ತರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next