Advertisement

8 ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ

10:25 AM Jun 23, 2020 | Suhan S |

ಚಿಕ್ಕಮಗಳೂರು: ಜಿಲ್ಲೆ ಹಾಗೂ ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ನೀಡಲು ಸರ್ಕಾರ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿದ್ದು, ಕಾಫಿನಾಡಿನ 8 ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ಆಯ್ಕೆ ಮಾಡಿದೆ.

Advertisement

ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯಾದ್ಯಂತ 483 ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ಗುರುತು ಮಾಡಿದ್ದು, ಅದರಲ್ಲಿ ಜಿಲ್ಲೆಯ 8 ಖಾಸಗಿ ಆಸ್ಪತ್ರೆಗಳು ಸೇರಿವೆ. ಆದರೆ, ಸರ್ಕಾರದ ಅಧಿಕೃತ ಆದೇಶ ಪ್ರತಿ ಇನ್ನೂ ಖಾಸಗಿ ಆಸ್ಪತ್ರೆಗಳಿಗೆ ತಲುಪಿಲ್ಲವೆಂದು ತಿಳಿದು ಬಂದಿದೆ. ಸರ್ಕಾರ ಬಿಡುಗಡೆ ಮಾಡಿರುವ ಖಾಸಗಿ ಆಸ್ಪತ್ರೆಗಳ ಪಟ್ಟಿಯಲ್ಲಿ ಚಿಕ್ಕಮಗಳೂರು ನಗರದ ಐದು ಆಸ್ಪತ್ರೆ, ಎನ್‌.ಆರ್‌.ಪುರ, ಕೊಪ್ಪ, ಕಡೂರು ತಾಲೂಕಿನಲ್ಲಿ ಒಂದೊಂದು ಆಸ್ಪತ್ರೆಯನ್ನು ಗುರುತಿಸಲಾಗಿದೆ.

ಚಿಕ್ಕಮಗಳೂರು ನಗರದ ಹೌಸಿಂಗ್‌ ಬೋರ್ಡ್‌ನಲ್ಲಿರುವ ಹೋಲಿಕ್ರಾಸ್‌ ಆಸ್ಪತ್ರೆ, ಆಶ್ರಯ ಆಸ್ಪತ್ರೆ, ಕೆಆರ್‌ ಎಸ್‌ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ರೆಟಿಕಾರ್ನ್ ಕಣ್ಣಿನ ಆಸ್ಪತ್ರೆ, ವಾತ್ಸಲ್ಯ ಆಸ್ಪತ್ರೆ, ಕಡೂರು ಪಟ್ಟಣದಲ್ಲಿರುವ ಶ್ರೀ ಮಾರುತಿ ಆಸ್ಪತ್ರೆ, ಕೊಪ್ಪ ಪಟ್ಟಣದ ಪ್ರಶಾಮಣಿ ಆಸ್ಪತ್ರೆ ಮತ್ತು ಎನ್‌.ಆರ್‌.ಪುರ ಪಟ್ಟಣದ ಪುಷ್ಪಾ ಆಸ್ಪತ್ರೆಗಳನ್ನು ಸರ್ಕಾರ ಬಿಡುಗಡೆ ಮಾಡಲಾಗಿರುವ ಪಟ್ಟಿಯಲ್ಲಿ ಗುರುತಿಸಲಾಗಿದೆ.

ಸರ್ಕಾರ ಸೋಂಕಿತರಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿದ್ದು, ಈ ಸಂಬಂಧ ಚಿಕಿತ್ಸೆ ವೇಳೆ ಪಾಲಿಸಬೇಕಾದ ಮಾರ್ಗಸೂಚಿ, ಚಿಕಿತ್ಸಾ ಶುಲ್ಕಗಳ ಬಗ್ಗೆ ಅಧಿಕೃತ ಆದೇಶ ಆಸ್ಪತ್ರೆಗಳ ಮುಖ್ಯಸ್ಥರ ಕೈಸೇರಿಲ್ಲ ಎಂದು ತಿಳಿದು ಬಂದಿದ್ದು, ಆದೇಶಕ್ಕಾಗಿ ಎದುರು ನೋಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next