Advertisement
ಗಡಿಯಲ್ಲಿ ಹಲವು ಡ್ರೋಣ್ ಮೂಲಕ ಶಸ್ತ್ರಾಸ್ತ್ರಗಳನ್ನು ಎಸೆಯುತ್ತಿರುವ ಈ ಘಟನೆ ಬಗ್ಗೆ ತನಿಖೆ ನಡೆಸಬೇಕೆಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿಕೊಂಡಿದ್ದಾರೆ.
Related Articles
Advertisement
ಪಂಜಾಬ್ ಪೊಲೀಸರು ಸೆಪ್ಟಂಬರ್ 22ರಂದು ಟಾರನ್ ಟಾರನ್ ಪ್ರದೇಶದಲ್ಲಿ ಖಾಕಿಸ್ತಾನ್ ಜಿಂದಾಬಾದ್ ಫೋರ್ಸ್(ಕೆಝಡ್ ಎಫ್) ನ ನಾಲ್ವರು ಉಗ್ರರನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ಈ ಮಾಹಿತಿ ಬಾಯ್ಬಿಟ್ಟಿದ್ದರು. ಶಸ್ತ್ರಾಸ್ತ್ರಗಳನ್ನು ಎಸೆದ ಡ್ರೋಣ್ ಅನ್ನು ಸುಟ್ಟುಹಾಕಲು ಪ್ರಯತ್ನಿಸಿದ್ದರು, ಆದರೆ ಅದು ವಿಫಲವಾಗಿತ್ತು ಎಂಬುದು ವಿಚಾರಣೆ ವೇಳೆ ತಿಳಿಸಿದ್ದರು. ಇದೀಗ ಡ್ರೋಣ್ ಅನ್ನು ವಿಧಿವಿಜ್ಞಾನ ಪರೀಕ್ಷೆ ಕಳುಹಿಸಲಾಗಿದೆ. ಈ ಡ್ರೋಣ್ ರಾಡಾರ್ ಕಣ್ತಪ್ಪಿಸಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.