ವಾಷಿಂಗ್ಟನ್: ಗನ್ ಮ್ಯಾನ್ ನೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿ ಎಂಟು ಮಂದಿಯನ್ನು ಹತ್ಯೆಗೈದು ಬಳಿಕ ತನಗೆ ತಾನೇ ಗುಂಡು ಹೊಡೆದುಕೊಂಡು ಸಾವಿಗೀಡಾಗಿರುವ ಘಟನೆ ಅಮೆರಿಕದ ಇಂಡಿಯಾನಾಪೊಲಿಸ್ ನಗರದಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಸಿಎಂ ಬಿಎಸ್ ವೈ ಆರೋಗ್ಯದಲ್ಲಿ ಮತ್ತೆ ಏರುಪೇರು! ಆಸ್ಪತ್ರೆಗೆ ದಾಖಲು
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದ ಫೆಡೆಕ್ಸ್ ಫೆಸಿಲಿಟಿ ಸಮೀಪ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇನ್ನೂ ಹಲವಾರು ಮಂದಿ ಗಾಯಗೊಂಡಿದ್ದು, ಇದರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಿನೇ ಕುಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಗನ್ ಹಿಡಿದ ವ್ಯಕ್ತಿಯೊಬ್ಬ ಒಳಹೋಗುತ್ತಿರುವುದನ್ನು ಗಮನಿಸಿದ್ದೆ, ನಂತರ ಏಕಾಏಕಿ ಗುಂಡಿನ ದಾಳಿಯ ಶಬ್ದ ಕೇಳಿಸಿರುವುದಾಗಿ ಸ್ಥಳೀಯ ಘಟಕವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
ಗುಂಡಿನ ದಾಳಿಗೆ ಎಂಟು ಮಂದಿ ಸಾವನ್ನಪ್ಪಿದ್ದು, ಘಟನೆ ನಂತರ ವ್ಯಕ್ತಿ ತಾನೂ ಕೂಡಾ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಕುಕ್ ಮಾಹಿತಿ ನೀಡಿದ್ದಾರೆ. ಈ ಘಟನೆಯಿಂದ ಸಾರ್ವಜನಿಕರ ಸುರಕ್ಷತೆಗೆ ಯಾವುದೇ ತೊಂದರೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿ ಹೇಳಿದೆ.