Advertisement

ಭೀಮಾ ನದಿಗೆ 8 ಲಕ್ಷ ಕ್ಯೂಸೆಕ್‌ ಹರಿವು ಸಾಧ್ಯತೆ

06:53 PM Oct 18, 2020 | Suhan S |

ಯಾದಗಿರಿ: ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸನ್ನತಿ ಬ್ಯಾರೇಜ್‌ನಲ್ಲಿ ಸದ್ಯಕ್ಕೆ 2.70 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿರುವ ಸೊನ್ನ ಬ್ಯಾರೇಜ್‌ನಿಂದಸುಮಾರು 8 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ನದಿ ಪಾತ್ರದ ಗ್ರಾಮಗಳ ಜನ ಹಾಗೂ ಜಾನುವಾರುಗಳ ರಕ್ಷಣೆಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಅವರು ತಹಶೀಲ್ದಾರರು ಹಾಗೂ ನೋಡಲ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ತುರ್ತುಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದಅವರು, ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿಪ್ರವಾಹದ ಸಂದರ್ಭ ಎದುರಾಗಲಿದೆ.ಗ್ರಾಮಗಳ ಜನ ಹಾಗೂ ಜಾನುವಾರುಗಳನ್ನುಕೂಡಲೇ ಸುರಕ್ಷಿತ ಸ್ಥಳಗಳಲ್ಲಿ ಸ್ಥಾಪಿಸಲಾಗಿರುವಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಬೇಕಿದ್ದು,ನಿಯೋಜಿಸಲಾದ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಪ್ರವಾಹ ಸಂಭವಿಸಬಹುದಾದ ಗ್ರಾಮಗಳ ಗ್ರಾಮಸ್ಥರನ್ನುಸ್ಥಳಾಂತರಿಸಲು ಅನುಕೂಲವಾಗುವಂತೆ ವಾಹನಗಳನ್ನು ಕಾಯ್ದಿರಿಸಿಕೊಳ್ಳಲು ನಿರ್ದೇಶನ ನೀಡಿದರು.

ಭೀಮಾ ನದಿ ಪಾತ್ರದ ಸುಮಾರು 500 ಮೀಟರ್‌ ವ್ಯಾಪ್ತಿಯಲ್ಲಿ ಬರುವ 12 ಗ್ರಾಮಗಳಿಗೆ ಪ್ರವಾಹ ಸಂಭವಿಸಲಿದ್ದು, ಆ ಗ್ರಾಮಗಳಲ್ಲಿರುವಜನರನ್ನು ಸ್ಥಳಾಂತರಿಸಬೇಕು. ಈ ಕುರಿತು ಜನಪ್ರತಿನಿಧಿಗಳಿಗೆ ಮಾಹಿತಿ ನೀಡಬೇಕು. ಪ್ರವಾಹದಿಂದ 33 ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಳ್ಳಲಿದ್ದು, ಮುಂಜಾಗ್ರತಾ ಕ್ರಮವಾಗಿ ಆ ಗ್ರಾಮಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ವಿತರಿಸುವಂತೆ ಆಹಾರ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನಗೆ ಸೂಚಿಸಿದರು.

ಜಿಲ್ಲೆಯ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಕಾಳಜಿ ಕೇಂದ್ರಗಳನ್ನು ನಿರ್ಮಿಸಬಹುದಾಗಿರುತ್ತದೆ. ಮುಂಜಾಗ್ರತಾ ಕ್ರಮವಾಗಿ ಸ್ವಚ್ಛತೆ ಕಾಪಾಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿಯೂ ಸಹ ಮುಂಜಾಗ್ರತಾ ಕ್ರಮವಾಗಿ ಸ್ವತ್ಛತೆ ಕಾಪಾಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಿದರು.

ಜಿಪಂ ಸಿಇಒ ಶಿಲ್ಪಾ ಶರ್ಮಾ, ಎಸ್‌ಪಿ ಋಷಿಕೇಶ ಸೋನಾವನೆ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್‌.ಸೋಮನಾಳ ಸೇರಿದಂತೆ ಹಲವು ಅಧಿಕಾರಿಗಳಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next