Advertisement

ಬಾಗಲಕೋಟೆಯಿಂದ ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ 8 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ಜಪ್ತಿ

04:21 PM Feb 03, 2021 | keerthan |

ವಿಜಯಪುರ: ಪಡಿತರ ಅಕ್ಕಿಯನ್ನು‌ ಅಕ್ರಮವಾಗಿ ಕಾಳ ಸಂತೆಗೆ ಮಾರಾಟಕ್ಕೆ ರಾಷ್ಟ್ರೀಯ ಹೆದ್ದಾರಿ ಮಾರ್ಗದ ಮೂಲಕ ಸಾಗಿಸುವಾಗ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳ ತಂಡ 7.99 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಜರುಗಿದೆ.

Advertisement

ಜಿಲ್ಲೆಯ ಬಸವನಬಾಗೇವಾಡಿ ತಾಲೂಕ ಮನಗೂಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಜಯಪುರ -ನಿಡಗುಂದಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ದಾವಣಗೆರೆ ಮೇಯರ್ ಚುನಾವಣೆ ಪಟ್ಟಿಯಲ್ಲಿ ಪರಿಷತ್ ಸದಸ್ಯರ ಹೆಸರು: ಕಾಂಗ್ರೆಸ್ ಪ್ರತಿಭಟನೆ

ಬಾಗಲಕೋಟೆ ತಾಲೂಕಿನ ಗದ್ದನಕೇರಿ ಮೂಲದ ಸದ್ದಾಂ ಅಮೀನಸಾಬ್ ಜಂಗಿ ಎಂಬ ವ್ಯಕ್ತಿ ಕೆಎ-29 B-8299 ಸಂಖ್ಯೆಯ ವಾಹನದಲ್ಲಿ ಅಕ್ರಮವಾಗಿ ಅಕ್ಕಿ ಸಾಗಿಸುವಾಗ ಸೆರೆ ಸಿಕ್ಕಿದ್ದಾರೆ. ಖಚಿತ ಮಾಹಿತಿ ಆಧರಿಸಿ ಪೋಲಿಸ್ ಆಹಾರ ಇಲಾಖೆ ಅಧಿಕಾರಿಗಳ ತಂಡ ಜಂಟಿಯಾಗಿ ದಾಳಿ ನಡೆಸಿದ್ದು, ದಾಳಿಯ ವೇಳೆ 7.99 ಲಕ್ಷ ರೂ. ಮೌಲ್ಯದ 296 ಕ್ವಿಂಟಲ್ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.

Advertisement

ಈ ಕುರಿತು ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಗಿ ಅಹಾರ ಇಲಾಖೆ ವಿಜಯಪುರ ಉಪ ನಿರ್ದೇಶಕರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next