ಬೆಂಗಳೂರು: ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದಿರುವ ಕನ್ನಡಿಗ ಗುರುರಾಜ ಪೂಜಾರಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣ ಗೌಡ ಅವರು ಅಭಿನಂದನೆ ಸಲ್ಲಿಸಿ 8 ಲಕ್ಷ ರೂಪಾಯಿ ನಗದು ಪುರಸ್ಕಾರ ಘೋಷಿಸಿದ್ದಾರೆ.
ಪುರುಷರ 55 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆದ್ದಿರುವ ಸಂಕೇತ್ ಸರ್ಗರ್ ಅವರಿಗೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಪುರುಷರ 61 ಕೆಜಿ ವಿಭಾಗದಲ್ಲಿ ಕನ್ನಡಿಗ , ಕುಂದಾಪುರ ಮೂಲದ ವೇಟ್‌ಲಿಫ್ಟರ್ ಗುರುರಾಜ ಪೂಜಾರಿ ಶನಿವಾರ ಕಂಚಿನ ಪದಕ ಗೆದ್ದಿದ್ದಾರೆ.
ಈ ಪದಕದೊಂದಿಗೆ ಭಾರತಕ್ಕೆ ಎರಡನೇ ಪದಕವನ್ನು ಗುರುರಾಜ ನೀಡಿದ್ದಾರೆ. ಗುರುರಾಜ ಒಟ್ಟು 269 ಕೆಜಿ ಎತ್ತುವ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದರು.