ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಕಡೂರಿನ ರಕ್ಷಿತಾ ಕುಟುಂಬಕ್ಕೆ 8 ಲಕ್ಷ ಪರಿಹಾರ ನೀಡಲಾಗಿದೆ.
ಬಸ್ ನಿಂದ ಬಿದ್ದು ಮೃತಪಟ್ಟಿದ್ದ ರಕ್ಷಿತಾ ಕುಟುಂಬಕ್ಕೆ ಸರ್ಕಾರದ ವತಿಯಿಂದ ಎಂಟು ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಸಿಎಂ ಪರಿಹಾರ ನಿಧಿಯಿಂದ ಐದು ಲಕ್ಷ, ತಾಂಡಾ ಅಭಿವೃದ್ಧಿ ನಿಗಮದಿಂದ ಒಂದು ಲಕ್ಷ, ಉದ್ಯಮಶೀಲತೆ ಯೋಜನೆಯಡಿ 2 ಲಕ್ಷ, ಒಟ್ಟು ಎಂಟು ಲಕ್ಷ ಪರಿಹಾರ ನೀಡಲಾಗಿದೆ.
ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಕುಡುಚಿ ಶಾಸಕ ಪಿ.ರಾಜೀವ್ ಅವರು ಸೋಮನಹಳ್ಳಿ ತಾಂಡ್ಯಾಗೆ ಬಂದು ತಾಂಡಾ ಅಭಿವೃದ್ಧಿ ನಿಗಮ ಹಾಗೂ ಉದ್ಯಮಶೀಲತೆ ಯೋಜನೆಯಡಿಯ ಚೆಕ್ ನೀಡಲಿದ್ದಾರೆ.
ಇದನ್ನೂ ಓದಿ:ಸಿಎಸ್ ಕೆ ತೊರೆಯಲಿದ್ದಾರಾ ಜಡೇಜಾ..? ಊಹಾಪೋಹಗಳಿಗೆ ತೆರೆ ಎಳೆದ ಫ್ರಾಂಚೈಸಿ
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ರಕ್ಷಿತಾ ಚಿಕ್ಕಮಗಳೂರು ನಗರದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದರು. ಐದು ದಿನದ ಹಿಂದೆ ಬಸ್ ಹತ್ತುವಾಗ ಬಿದ್ದು ಮೆದುಳು ನಿಷ್ಕ್ರಿಯಗೊಂಡಿತ್ತು. ರಕ್ಷಿತಾ ಮೆದುಳು ನಿಷ್ಕ್ರಿಯಗೊಂಡ ಬಳಿಕ ಕುಟುಂಬಸ್ಥರು ಒಂಬತ್ತು ಅಂಗಾಂಗಳನ್ನು ದಾನ ಮಾಡಿದ್ದರು.