Advertisement

8 ಮೇಲ್ಮನೆ ಸದಸ್ಯರ ಸದಸ್ಯತ್ವ ರದ್ದುಪಡಿಸುವಂತೆ ಮನವಿ

11:32 AM May 21, 2017 | |

ಬೆಂಗಳೂರು: ದೂರದ ಊರಿನ ವಿಳಾಸ ನೀಡಿ ಅಕ್ರಮವಾಗಿ ಸಾರಿಗೆ ಭತ್ಯೆ ಪಡೆದು ಸರ್ಕಾರಕ್ಕೆ ವಂಚಿಸುತ್ತಿರುವ ಆರೋಪದ ಮೇಲೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಎಂಟು ವಿಧಾನಪರಿಷತ್‌ ಸದಸ್ಯರನ್ನು ಅನರ್ಹಗೊಳಿಸುವಂತೆ ಕೋರಿ ಬಿಬಿಎಂಪಿ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ ಶನಿವಾರ ವಿಧಾನಪರಿಷತ್‌ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಅವರಿಗೆ ದೂರು ಸಲ್ಲಿಸಿದ್ದಾರೆ.

Advertisement

ವಿಧಾನಸೌಧದಲ್ಲಿ ಶನಿವಾರ ವಕೀಲರ ತಂಡದ ಜತೆ ಶಂಕರಮೂರ್ತಿ ಅವರನ್ನು ಭೇಟಿ ಮಾಡಿದ ಪದ್ಮನಾಭರೆಡ್ಡಿ, ಬೆಂಗಳೂರಿನ ವಿಳಾಸ ನೀಡಿ ಬಿಬಿಎಂಪಿ ಮೇಯರ್‌, ಉಪಮೇಯರ್‌ ಚುನಾವಣೆಯಲ್ಲಿ ಮತ ಚಲಾವಣೆ ಮಾಡಿರುವ ಎಂಟು ಮಂದಿ ವಿಧಾನ ಪರಿಷತ್‌ ಸದಸ್ಯರು ಭತ್ಯೆ ಪಡೆಯಲು ತಮ್ಮ ಸ್ವಗ್ರಾಮ ಹಾಗೂ ಸ್ವಂತ ಊರಿನ ವಿಳಾಸ ನೀಡಿದ್ದಾರೆ. ಹೀಗಾಗಿ, ಕೂಡಲೇ ಅವರ ಸದಸ್ವತ್ಯ ರದ್ದುಪಡಿಸುವಂತೆ ಮನವಿ ಮಾಡಿದರು.

ಇವರು ಅಕ್ರಮವಾಗಿ ಸಾರಿಗೆ ಭತ್ಯೆ ಪಡೆದು ವಿಧಾನ ಪರಿಷತ್‌ ಸದಸ್ಯ ಸ್ಥಾನದ ಗೌರವಕ್ಕೆ ಚ್ಯುತಿ ತಂದಿದ್ದು, ಅವರಿಗೆ ಆ ಸ್ಥಾನದಲ್ಲಿ ಮುಂದುವರಿಯಲು ಅವಕಾಶ ನೀಡಬಾರದು. ವಿಧಾನ ಪರಿಷತ್‌ ಸದಸ್ಯರಾದ ಕಾಂಗ್ರೆಸ್‌ನ ಅಲ್ಲಂ ವೀರಭದ್ರಪ್ಪ, ಆರ್‌.ಬಿ.ತಿಮ್ಮಾಪುರ, ರಘು ಆಚಾರ್‌, ಎನ್‌.ಎಸ್‌.ಬೋಸರಾಜು,

-ಎಸ್‌.ರವಿ, ಎಂ.ಡಿ.ಲಕ್ಷ್ಮೀನಾರಾಯಣ್‌, ಜೆಡಿಎಸ್‌ನ ಸಿ.ಆರ್‌.ಮನೋಹರ್‌, ಅಪ್ಪಾಜಿಗೌಡ ಅವರು ಬೆಂಗಳೂರಿನ ವಾಸದ ವಿವರ ನೀಡಿ 2016ರಲ್ಲಿ ನಡೆದ ಮೇಯರ್‌, ಉಪಮೇಯರ್‌ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮನವಿ ಸ್ವೀಕರಿಸಿದ ಶಂಕರಮೂರ್ತಿ ಅವರು ಈ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next