Advertisement

Pak ; ಖೈಬರ್ ಪಖ್ತುಂಖ್ವಾದಲ್ಲಿ ಆತ್ಮಾಹುತಿ ದಾಳಿ: 8 ಸೈನಿಕರು ಬಲಿ, ಹಲವರಿಗೆ ಗಾಯ

10:49 PM Aug 31, 2023 | Team Udayavani |

ಇಸ್ಲಾಮಾಬಾದ್ : ಪಾಕಿಸ್ಥಾನದ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಎಂಟು ಭದ್ರತಾಸಿಬಂದಿ ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಟೆಲಿಗ್ರಾಫ್ ವರದಿ ಮಾಡಿದೆ.

Advertisement

ಮಾಲಿ ಖೇಲ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಬೆಂಗಾವಲು ಪಡೆಯ ಮೇಲೆ ಮೋಟಾರು ಬೈಕ್‌ನಲ್ಲಿ ಬಂದ ಆತ್ಮಹತ್ಯಾ ಬಾಂಬರ್ ಢಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ.

ಒಂದು ತಿಂಗಳ ಅವಧಿಯಲ್ಲಿ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಜುಲೈ 30 ರಂದು, ರಾಜಕೀಯ ಪಕ್ಷದ ಸಭೆಯಲ್ಲಿ ಆತ್ಮಹತ್ಯಾ ಬಾಂಬರ್ ಸ್ಫೋಟಗೊಂಡ ನಂತರ ಕನಿಷ್ಠ 54 ಜನರು ಸಾವನ್ನಪ್ಪಿ, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next