ಹೈದರಾಬಾದ್: ಒಂದೇ ಆಸ್ಪತ್ರೆಯಲ್ಲಿ 8 ರೋಗಿಗಳು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಆಂಧ್ರಪ್ರದೇಶದ ನೆಲ್ಲೂರುನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ 8 ರೋಗಿಗಳು ಮೃತಪಟ್ಟಿದ್ದಾರೆ. ಆಮ್ಲಜನಕದ ಕೊರತೆಯಿಂದ ರೋಗಿಗಳು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳೇ ಆಕ್ಸಿಜನ್ ಪೊರೈಕೆಯ ಕೊರತೆಗೆ ಕಾರಣವೆಂದು ಆರೋಪಿಸಿದ್ದಾರೆ.
ಆದರೆ ಈ ಆರೋಪವನ್ನು ಆಸ್ಪತ್ರೆ ಅಧಿಕಾರಿಗಳು ಅಲ್ಲಗೆಳೆದಿದ್ದು, ಯಾವುದೇ ರೋಗಿಗಳು ಆಮ್ಲಜನಕದ ಕೊರತೆಯಿಂದ ಮೃತಪಟ್ಟಿಲ್ಲ. ರೋಗಿಗಳಿಗೆ ಸಂಬಂಧಿಸಿದ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಎಂಟು ರೋಗಿಗಳಲ್ಲಿ 6 ರೋಗಿಗಳನ್ನು ಐಸಿಯು ವಾರ್ಡ್ ನಲ್ಲಿ ದಾಖಲಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಈ ಘಟನೆ ಸಂಬಂಧ ಸರ್ಕಾರಿ ಜನರಲ್ ಆಸ್ಪತ್ರೆಯ ಅಧೀಕ್ಷಕರು ಸೂಕ್ತ ತನಿಖೆ ನಡೆಸಿದ್ದು, ಎಂಟು ಜನರ ಸಾವು ಆಮ್ಲಜನಕದ ಕೊರತೆಯಿಂದ ಆಗಿಲ್ಲ. ಬದಲಾಗಿ ರೋಗಿಗಳ ಸಾವಿಗೆ ಇತರ ವೈದ್ಯಕೀಯ ಕಾರಣವನ್ನು ವರದಿಯಲ್ಲಿ ಉಲ್ಲೇಖಿಸಿ ಜಿಲ್ಲಾಧಿಕಾರಿಗೆ ಸಲ್ಲಿಸಲಾಗಿದೆ.