Advertisement
ವಿಷಯವಾರು 25 ಅಂಕಗಳಿಗೆ ಪ್ರಶ್ನೆ ಪತ್ರಿಕೆ ತಯಾರಿಸಿ, ಸಮಯ ನಿಗದಿಪಡಿಸಿ ವಿದ್ಯಾರ್ಥಿಗಳಿಗೆ ಪುಸ್ತಕ ನೋಡಿ ಉತ್ತರಿಸಲು ಅವಕಾಶ ನೀಡಬೇಕು ಎಂದು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಹೈಸ್ಕೂಲ್ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ಓಪನ್ ಬುಕ್ ಎಕ್ಸಾಂ ಇದ್ದಾಗ ವಿದ್ಯಾರ್ಥಿಗಳು ಪುಸ್ತಕ ಓದುವುದನ್ನು ರೂಢಿಸಿಕೊಳ್ಳಬೇಕಾಗುತ್ತದೆ. ಪಠ್ಯ, ನೋಟ್ ಬುಕ್ ಮತ್ತು ಸಂಬಂಧಿತ ರೆಫರೆನ್ಸ್ ಬುಕ್‌ಗಳಲ್ಲಿ ಯಾವ ವಿಷಯ ಎಲ್ಲಿದೆ ಅದರ ಬಳಕೆ ಹೇಗೆ ಎಂಬ ಸ್ಪಷ್ಟ ಅರಿವು ಅವರಿಗೆ ಇರಬೇಕಾಗುತ್ತದೆ. ಆದ್ದರಿಂದ ಮಕ್ಕಳಲ್ಲಿ ಪಠ್ಯ ಓದುವ ಮನೋಭಾವವನ್ನು ಹೆಚ್ಚಿಸಲು ತೆರೆದ ಪುಸ್ತಕ ಪರೀಕ್ಷೆ ವ್ಯವಸ್ಥೆಯನ್ನು ಪರಿಚಯಿಸಿದ್ದೇವೆ ಎಂದು ಶಿಕ್ಷಣ ಇಲಾಖೆಯ ಪ್ರೌಢ ಶಿಕ್ಷಣ ವಿಭಾಗದ ನಿರ್ದೇಶಕ ಕೃಷ್ಣಾಜಿ ಎಸ್.ಕರಿಚಣ್ಣವರ ಹೇಳುತ್ತಾರೆ.
Related Articles
ದೈನಂದಿನ ಪಾಠದ ನಿರೀಕ್ಷೆಯಲ್ಲಿ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಅನಿರೀಕ್ಷಿತವಾಗಿ ಕಿರು ಪರೀಕ್ಷೆಯನ್ನು ನಡೆಸುವಂತೆಯೂ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ವಿಷಯದ ಬೋಧನಾ ಅವಧಿಗೆ ಸೀಮಿತಗೊಳಿಸಿ ಪ್ರಶ್ನೆಗಳನ್ನು ನೀಡಿ ತಮ್ಮ ನೋಟ್ ಬುಕ್‌ಗಳಲ್ಲೇ ಉತ್ತರ ಬರೆಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಬೇಕು ಎಂದು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ಹೇಳಲಾಗಿದೆ.
Advertisement
ಏನಿದು ತೆರೆದ ಪುಸ್ತಕದ ಪರೀಕ್ಷೆ?ಸದ್ಯ ರೂಢಿಯಲ್ಲಿರುವ ಪರೀಕ್ಷಾ ಕ್ರಮದಲ್ಲಿ ವಿದ್ಯಾರ್ಥಿಗಳು ಉತ್ತರಗಳನ್ನು ನೆನಪಿಟ್ಟುಕೊಂಡು ಬರೆಯಬೇಕಾಗುತ್ತದೆ.
ಓಪನ್ ಬುಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಪಠ್ಯಪುಸ್ತಕ, ನೋಟ್ ಬುಕ್ ಮತ್ತು ಇನ್ನಿತರ ರೆಫರೆನ್ಸ್ ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ.
ಪುಸ್ತಕಗಳನ್ನು ಮುಂಚಿತವಾಗಿಯೇ ಓದಿಕೊಂಡಿದ್ದರೆ ಮಾತ್ರ ಬರೆಯಲು ಸಾಧ್ಯ.
ಸದ್ಯ ಎಲ್ಲ ವಿಷಯಗಳಲ್ಲಿ 25 ಅಂಕಗಳಿಗೆ ಪ್ರಾಯೋಗಿಕ ಪರೀಕ್ಷೆ. ಫಲಿತಾಂಶ ನೋಡಿ ಮುಂದಿನ ನಿರ್ಣಯ. ಪುಸ್ತಕ ಓದುತ್ತಾರೆ
ತೆರೆದ ಪುಸ್ತಕ ಪರೀಕ್ಷೆಯಿಂದ ವಿದ್ಯಾರ್ಥಿಗಳು ತಮ್ಮ ಬಳಿಯಿರುವ ಪಠ್ಯಪುಸ್ತಕ, ನೋಟ್ ಬುಕ್ ಮತ್ತು ಇತರ ಸಂಪನ್ಮೂಲಗಳನ್ನು ಚೆನ್ನಾಗಿ ಓದಿ ಮನದಟ್ಟು ಮಾಡಿಕೊಳ್ಳುತ್ತಾರೆ ಎಂಬುದು ನಮ್ಮ ನಿರೀಕ್ಷೆ
– ಕೃಷ್ಣಾಜಿ ಎಸ್.ಕರಿಚಣ್ಣವರ,
ಪ್ರೌಢಶಿಕ್ಷಣ ವಿಭಾಗದ ನಿರ್ದೇಶಕ ರಾಕೇಶ್ ಎನ್.ಎಸ್.