Advertisement

80 ಕೋಟಿ ಜನರಿಗೆ ದೀಪಾವಳಿಯವರೆಗೆ ಉಚಿತ ಪಡಿತರ : ದೇಶಕ್ಕೆ ಮೋದಿ ಅಭಯ

06:50 PM Jun 07, 2021 | Team Udayavani |

ನವ ದೆಹಲಿ : ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಜೂನ್ 07) ಸಂಜೆ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು.

Advertisement

ಖಾಸಗಿ ಆಸ್ಪತ್ರೆಗಳು ಶೇ.25ರಷ್ಟು ಲಸಿಕೆ ಖರೀದಿಸಬಹುದಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೇವಲ 150 ರೂಪಾಯಿ ಸೇವಾ ಶುಲ್ಕ ವಿಧಿಸಬಹುದಾಗಿದೆ. ಶೇ.75ರಷ್ಟು ಲಸಿಕೆಯನ್ನು ಕೇಂದ್ರ ಸರ್ಕಾರ ಖರೀದಿಸಲಿದೆ.  ಜೂನ್ 21ರಿಂದ ದೇಶದ ಜನರಿಗೆ ಉಚಿತ ಲಸಿಕೆ ನೀಡಿಕೆ. ನವೆಂಬರ್(ದೀಪಾವಳಿ) ವರೆಗೆ ಬಡವರಿಗೆ ಉಚಿತವಾಗಿ ಆಹಾರ ಧಾನ್ಯ ನೀಡಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ : ಭುವನಗಿರಿ ಸಂಸ್ಥಾನ ಮಠದ ಶ್ರೀ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಕೋವಿಡ್ ಗೆ ಬಲಿ

ತಮ್ಮ ಭಾಷಣದಲ್ಲಿ ಸಂಕಷ್ಟದಲ್ಲಿರುವ ದೇಶದ ಬಡ ವರ್ಗದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಸಾಂಕ್ರಾಮಿಕ ಸಮಯದಲ್ಲಿ ಸರ್ಕಾರ ಬಡವರೊಂದಿಗಿದೆ. ದೇಶದ ಜನಸಂಖ್ಯೆಯಲ್ಲಿನ 80 ಕೋಟಿಗೂ ಹೆಚ್ಚು ಜನರಿಗೆ ನವೆಂಬರ್ ವರೆಗೆ ಪಡಿತರವನ್ನು ಸರ್ಕಾರದಿಂದ ಉಚಿತವಾಗಿ ನೀಡಲಾಗುತ್ತದೆ ಎಂದು ಭರವಸೆ ನಿಡಿದ್ದಾರೆ.

ಕೋವಿಡ್ ಮಹಾಪಿಡುಗಿನ ಈ  ಸಂದರ್ಭದಲ್ಲಿ ಬಡವರ ಎಲ್ಲಾ ಅಗತ್ಯಗಳನ್ನು ಗಮನಿಸಿ, ನಾವು ಅವರ ಜೊತೆಗೆ ಇರುತ್ತೇವೆ. ಈ ವರ್ಷ ಮೇ, ಜೂನ್‌ ತಿಂಗಳುಗಳಲ್ಲಿ ಉಚಿತ ಆಹಾರ ಧಾನ್ಯ ವಿತರಣೆ ಮಾಡಲು ಸೂಚಿಸಲಾಗಿತ್ತು. ಬಡವರು ಯಾರೂ ಹಸಿವಿನಿಂದ ಮಲಗಬಾರದು ಎಂದು ಇದನ್ನು ವಿಸ್ತರಿಸಿ ದೀಪಾವಳಿವರೆಗೂ ಉಚಿತವಾಗಿ ಆಹಾರ ಧಾನ್ಯ ನೀಡುತ್ತೇವೆ. ನವೆಂಬರ್​ ತಿಂಗಳವರೆಗೂ ಆಹಾರ ಧಾನ್ಯ ವಿತರಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.

Advertisement

ಇನ್ನು, ಕೇಂದ್ರ ಸರ್ಕಾರದ ಲಸಿಕಾ ನೀತಿಯ ಬಗ್ಗೆ ರಾಜಕೀಯ ವಲಯದಲ್ಲಿ ಹಾಗೂ ಸಾಮಾಜಿಕ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕೂಡ ಕೇಂದ್ರದ ಲಸಿಕಾ ನೀತಿಯನ್ನು ಇತ್ತೀಚೆಗೆ ಪ್ರಶ್ನೆ ಮಾಡಿತ್ತು, ಆದರೇ, ಮೋದಿ ತಮ್ಮ ಭಾಷಣದಲ್ಲಿ ಪರೋಕ್ಷವಾಗಿ ತಮ್ಮ ಲಸಿಕಾ ನೀತಿಯನ್ನು ಸಮರ್ಥಿಸಿಕೊಂಡಿದ್ದಲ್ಲದೇ, ಕೇಂದ್ರವು ರಾಜ್ಯಗಳಿಂದ ಲಸಿಕಾ ನಿಯಂತ್ರಣವನ್ನು ಹಿಂಪಡೆಯುತ್ತದೆ ಮತ್ತು ಮುಂದಿನ ಎರಡು ವಾರಗಳಲ್ಲಿ ಉಚಿತ ಲಸಿಕೆಗಳನ್ನು ನೀಡುವುದಾಗಿ ಘೋಷಿಸಿದ್ದಾರೆ.

ಸದ್ಯ ದೇಶದಲ್ಲಿ, ಪಾಸಿಟಿವಿಟಿ ರೇಟ್  ಶೇಕಡಾ 6.33 ಕ್ಕೆ ಇಳಿದಿದೆ. ಸತತ 14 ದಿನಗಳಿಂದ ಭಾರತವು ಪಾಸಿಟಿವಿಟಿ ರೇಟ್  ಶೇಕಡಾ 10 ಕ್ಕಿಂತ ಕಡಿಮೆ ವರದಿ ಮಾಡಿದೆ.

ದೇಶದಲ್ಲಿ ಕೋವಿಡ್ ಹೊಸ ಪ್ರಕರಣಗಳು ದಿನ ನಿತ್ಯ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳು ಲಾಕ್ ಡೌನ್ ನನ್ನು ತೆರವು ಗೊಳಿಸುವ ನಿರ್ಧಾರಕ್ಕೆ ಬಂದಿದ್ದು, ಮತ್ತೆ ಸಹಜ ಸ್ಥಿತಿಯನ್ನು ಎದುರುಗಾಣುತ್ತಿವೆ.

ಇದನ್ನೂ ಓದಿ :   ಮರಾಠ ಮೀಸಲಾತಿ ಬೇಡಿಕೆ: ಜೂ. 8ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಠಾಕ್ರೆ, ಪ್ರಧಾನಿ ಮೋದಿ ಭೇಟಿ

Advertisement

Udayavani is now on Telegram. Click here to join our channel and stay updated with the latest news.

Next