ಬೆಂಗಳೂರು: ವ್ಯಾಪಾರಿಯೊಬ್ಬರನ್ನು ಅಡ್ಡಗಟ್ಟಿದ್ದ 80 ಲಕ್ಷ ರೂ. ದರೋಡೆ ಮಾಡಿದ್ದ ಘಟನೆ ಮಹದೇವಪುರ
ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ.
Advertisement
ಕಾರಿನಲ್ಲಿ ಹಣ ಇಟ್ಟುಕೊಂಡು ವರ್ತಕರೊಬ್ಬರು ಹೊರಟಿದ್ದರು. ಈ ಸಂದರ್ಭದಲ್ಲಿ ಅವರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ಮಾರಕಾಸ್ತ್ರಗಳನ್ನು ತೋರಿಸಿ ಸುಲಗೆ ಮಾಡಿ ಪರಾರಿಯಾಗಿದ್ದರು. ಈ ಕುರಿತು ವ್ಯಾಪಾರಿ ದೂರು ದಾಖಲಿಸಿದ್ದರು.
“ಬಂಧಿತರಲ್ಲಿ ವ್ಯಕ್ತಿಯೊಬ್ಬ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯ
ಎನ್ನಲಾಗುತ್ತಿದೆ. ಆದ್ದರಿಂದ ಎಲ್ಲರನ್ನೂ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.