Advertisement
ಗ್ರಾಮ ಪಂಚಾಯ್ತಿ ಚುನಾವಣೆಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಿರುವ ಗ್ರಾಮ ಸ್ವರಾಜ್ಯ ಸಮಾವೇಶಕ್ಕೆ ಪೂರ್ವಭಾವಿಯಾಗಿ ಸೋಮವಾರ ನಡೆದ ಪಕ್ಷದ ಪ್ರಮುಖರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಎಲ್ಲ ಜಾತಿಯವರು ಸ್ಪರ್ಧಿಸಲು ಪಕ್ಷದ ಆದ್ಯತೆ ನೀಡಲಿದೆ. ಪಂಚಾಯ್ತಿ ಚುನಾವಣೆ ಸಿದ್ಧತೆಗಾಗಿ ರಾಜ್ಯ ಪದಾಧಿಕಾರಿಗಳ ನೇತೃತ್ವದಲ್ಲಿ ಆರು ತಂಡ ರಚಿಸಲಾಗಿದೆ ಎಂದು ಹೇಳಿದರು.
Related Articles
Advertisement
ಪ್ರವಾಸ ಮಾಡಿ, ಜನರಿಗೆ ಸ್ಪಂದಿಸಿಪ್ರತಿಯೊಬ್ಬರು ಸಂಘಟನೆಗೆ ಒತ್ತು ನೀಡಬೇಕು. ಜನತೆ ಹಾಗೂ ಕಾರ್ಯಕರ್ತರಿಗೆ ಸ್ಪಂದಿಸಬೇಕು. ಜವಾಬ್ದಾರಿ ಪಡೆದು ಮನೆಯಲ್ಲಿರದೆ ಪ್ರವಾಸ ಕೈಗೊಂಡು ಸಂಘಟನೆಗೆ ಒತ್ತು ನೀಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕಿವಿಮಾತು ಹೇಳಿದ್ದಾರೆ. ನಗರದಲ್ಲಿ ಸೋಮವಾರ ನಡೆದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲೆಡೆ ಜನ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಆ ಮೂಲಕ ಸ್ಪಷ್ಟ ಬಹುಮತ ನೀಡುತ್ತಿದ್ದಾರೆ. ಇದಕ್ಕೆ ಕಾರಣ ಜನರಿಗೆ ಪಕ್ಷದ ಮೇಲಿರುವ ನಂಬಿಕೆ. ಆ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಇನ್ನಷ್ಟು ಗಟ್ಟಿಗೊಳಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ ಎಂಬುದಾಗಿ ತಿಳಿಸಿದರು ಎಂದು ಮೂಲಗಳು ಹೇಳಿವೆ. ಬಿಹಾರ ವಿಧಾನಸಭೆ ಗೆಲುವನ್ನು ಪ್ರಸ್ತಾಪಿಸಿದ ಬಿ.ಎಲ್. ಸಂತೋಷ್ ಅವರು ಕೋವಿಡ್-19 ನಿರ್ವಹಣೆ ನಿರ್ವಹಣೆ ಸೇರಿದಂತೆ ಕೇಂದ್ರ ಸರ್ಕಾರದ ಜನಪರ ಕಾರ್ಯಗಳನ್ನು ಮೆಚ್ಚಿ ಜನ ಬೆಂಬಲ ನೀಡುತ್ತಿದ್ದಾರೆ. ಹಾಗಾಗಿ ಜನರಿಗೆ ಸ್ಪಂದಿಸಬೇಕು. ಸದಾ ಜನ ಸಂಪರ್ಕದಲ್ಲಿದ್ದು, ಅವರೊಂದಿಗೆ ಒಡನಾಟವಿಟ್ಟುಕೊಳ್ಳಬೇಕು. ಜವಾಬ್ದಾರಿ ಪಡೆದು ಮನೆಯಲ್ಲಿ ಕುಳಿತರೆ ಏನೂ ಪ್ರಯೋಜನವಿಲ್ಲ. ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಿ ಸಂಘಟನೆಗೆ ಒತ್ತು ನೀಡಿದರಷ್ಟೇ ಪಕ್ಷವನ್ನು ಇನ್ನಷ್ಟು ಸದೃಢವಾಗಿ ಕಟ್ಟಲು ಸಾಧ್ಯ. ಆ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ:ಚಿಕ್ಕಮಗಳೂರು : ಪತ್ನಿಯಿಂದಲೇ ಪತಿ ಕೊಲೆ : ಪ್ರಿಯಕರನ ಜೊತೆ ಸೇರಿ ಗಂಡನ ಮರ್ಡರ್ ಆರು ಮಂದಿ ನೇತೃತ್ವದ ತಂಡ
ನ. 27ರಿಂದ ಡಿ.3ರವರೆಗೆ ರಾಜ್ಯಾದ್ಯಂತ ಗ್ರಾಮ ಸ್ವರಾಜ್ಯ ಸಮಾವೇಶಗಳು ನಡೆಯಲಿವೆ. ಪ್ರತಿ ಜಿಲ್ಲೆಯಲ್ಲಿ ಮೂರ್‍ನಾಲ್ಕು ತಾಲ್ಲೂಕಿಗೆ ಒಂದರಂತೆ ಜಿಲ್ಲೆಗೆ ತಲಾ ಎರಡು ಗ್ರಾಮ ಸ್ವರಾಜ್ಯ ಸಮಾವೇಶಗಳು ಆಯೋಜನೆಯಾಗಲಿವೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಮುಖ್ಯಮಂತ್ರಿರಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಜಗದೀಶ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್. ಅಶೋಕ್ ನೇತೃತ್ವದ ತಂಡಗಳು ಗ್ರಾಮ ಸ್ವರಾಜ್ಯ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿವೆ.