Advertisement

80 ತಾಲೂಕು ಪ್ರವಾಹಪೀಡಿತ

11:21 PM Aug 10, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ಆ.1ರಿಂದ ಈವರೆಗೆ ಸುರಿದ ಭಾರೀ ಮಳೆ ಹಾಗೂ ಇತರೆ ಕಾರಣಕ್ಕೆ ಅತಿವೃಷ್ಟಿಯಿಂದ ಉಂಟಾದ ಪ್ರವಾಹದಿಂದ ಜೀವ ಹಾನಿ ಜತೆಗೆ ಭಾರೀ ಪ್ರಮಾಣದಲ್ಲಿ ಬೆಳೆ ಹಾನಿ ಹಾಗೂ ಮೂಲ ಸೌಕರ್ಯಕ್ಕೆ ಹಾನಿಯಾಗಿದೆ. ಆ ಹಿನ್ನೆಲೆಯಲ್ಲಿ 17 ಜಿಲ್ಲೆಗಳ 80 ತಾಲೂಕುಗಳನ್ನು ತಕ್ಷಣ ದಿಂದ ಜಾರಿಗೆ ಬರುವಂತೆ ಪ್ರವಾಹಪೀಡಿತ ತಾಲೂಕು ಎಂದು ರಾಜ್ಯ ಸರ್ಕಾರ ಘೋಷಿಸಿ ಶನಿವಾರ ಆದೇಶ ಹೊರಡಿಸಿದೆ.

Advertisement

ಪ್ರವಾಹ ಪೀಡಿತವೆಂದು ಘೋಷಿಸಲಾಗಿರುವ ತಾಲೂಕುಗಳಲ್ಲಿ ಎಸ್‌ಡಿಆರ್‌ಎಫ್ ಹಾಗೂ ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಜಿಲ್ಲಾಡಳಿತವು ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದೆ. ಪ್ರವಾಹಪೀಡಿತ ಜಿಲ್ಲೆ, ತಾಲೂಕುಗಳ ವಿವರ ಹೀಗಿದೆ:

ಬೆಳಗಾವಿ: ಅಥಣಿ, ಬೈಲಹೊಂಗಲ, ಬೆಳಗಾವಿ, ಚಿಕ್ಕೋಡಿ, ಗೋಕಾಕ್‌, ಹುಕ್ಕೇರಿ, ಖಾನಾಪುರ, ರಾಮದುರ್ಗ, ರಾಯಬಾಗ, ಸವದತ್ತಿ.

ಬಾಗಲಕೋಟೆ: ಬಾದಾಮಿ, ಬಾಗಲಕೋಟೆ, ಬೀಳಗಿ, ಹುನಗುಂದ, ಜಮಖಂಡಿ, ಮುಧೋಳ.

ರಾಯಚೂರು: ದೇವದುರ್ಗ, ಲಿಂಗಸಗೂರು, ರಾಯಚೂರು.

Advertisement

ಕಲಬುರಗಿ: ಜೇವರ್ಗಿ, ಅಫ‌ಲ್‌ಪುರ.

ಯಾದಗಿರಿ: ಶಹಾಪುರ, ಶೋರಪುರ, ಯಾದಗಿರಿ.

ವಿಜಯಪುರ: ಬಸವನ ಬಾಗೇವಾಡಿ, ಮುದ್ದೇಬಿಹಾಳ, ಇಂಡಿ, ಸಿಂದಗಿ.

ಗದಗ: ನರಗುಂದ, ರೋಣ, ಶಿರಹಟ್ಟಿ.

ಹಾವೇರಿ: ಹಾನಗಲ್‌, ಹಾವೇರಿ, ಸವಣೂರು, ಶಿಗ್ಗಾಂವಿ, ಬ್ಯಾಡಗಿ, ಹಿರೇಕೆರೂರು.

ಧಾರವಾಡ: ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ, ನವಲಗುಂದ.

ಶಿವಮೊಗ್ಗ: ಹೊಸನಗರ, ಸಾಗರ, ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ.

ಹಾಸನ: ಸಕಲೇಶಪುರ, ಬೇಲೂರು, ಆಲೂರು.

ಚಿಕ್ಕಮಗಳೂರು: ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿ.

ಕೊಡಗು: ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ.

ದಕ್ಷಿಣ ಕನ್ನಡ: ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಪುತ್ತೂರು, ಸುಳ್ಯ.

ಉಡುಪಿ: ಕಾರ್ಕಳ, ಕುಂದಾಪುರ, ಉಡುಪಿ.

ಉತ್ತರ ಕನ್ನಡ: ಅಂಕೋಲಾ, ಭಟ್ಕಳ, ಹಳಿಯಾಳ, ಹೊನ್ನಾವರ, ಕಾರವಾರ, ಕುಮಟಾ, ಮುಂಡಗೋಡ, ಸಿದ್ದಾಪುರ, ಶಿರಸಿ, ಸೂಪಾ, ಯಲ್ಲಾಪುರ.

ಮೈಸೂರು: ಹೆಗ್ಗಡದೇವನಕೋಟೆ, ನಂಜನಗೂಡು, ಟಿ.ನರಸೀಪುರ.

Advertisement

Udayavani is now on Telegram. Click here to join our channel and stay updated with the latest news.

Next