Advertisement
ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಪ್ರಶ್ನೆಗೆ ಸದನದಲ್ಲಿ ಮಂಡಿಸಲಾದ ಉತ್ತರದಲ್ಲಿ ಸಚಿವರು ಈ ಮಾಹಿತಿ ನೀಡಿದ್ದಾರೆ. ಸ್ಮಾರ್ಟ್‌ಸಿಟಿ ಅಭಿಯಾನದಡಿ ಮಂಗಳೂರು ನಗರಕ್ಕೆ ಕೇಂದ್ರ ಸರಕಾರದಿಂದ 390 ಕೋಟಿ ಹಾಗೂ ರಾಜ್ಯ ಸರಕಾರದಿಂದ 414 ಕೋಟಿ ರೂ. ಸೇರಿ ಒಟ್ಟು 806 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಬಿಡು ಗಡೆಯಾದ ಅನುದಾನದಲ್ಲಿ 739.39 ಕೋಟಿ ರೂ. ಅನುದಾನ ವೆಚ್ಚ ಮಾಡಿ ಶೇ. 92ರಷ್ಟು ಆರ್ಥಿಕ ಪ್ರಗತಿ ಸಾಧಿಸಲಾಗಿದೆ.
ಸ್ಮಾರ್ಟ್‌ಸಿಟಿ ಅಭಿಯಾನದಡಿ 53 ಕಾಮಗಾರಿಗಳಿಗೆ ಟೆಂಡರ್ ಕರೆದು, ಎಲ್ಲ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. ಈ 53 ಕಾಮಗಾರಿಗಳ ಪೈಕಿ 30 ಕಾಮಗಾರಿಗಳು ಪೂರ್ಣಗೊಂಡಿದ್ದು, 20 ಕಾಮಗಾರಿಗಳು ಪ್ರಗತಿಯಲ್ಲಿವೆ. 3 ಕಾಮಗಾರಿಗಳನ್ನು ಪ್ರಾರಂಭಿಸಬೇಕಾಗಿದೆ. ಸ್ಮಾರ್ಟ್‌ಸಿಟಿ ಯೋಜನೆಯಡಿ ಕಳಪೆ ಕಾಮಗಾರಿ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.