Advertisement

ದೇಶದಲ್ಲಿ ಇಂದು 80,834 ಹೊಸ ಕೋವಿಡ್ ಪ್ರಕರಗಳು

05:10 PM Jun 13, 2021 | Team Udayavani |

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಯಲ್ಲಿ 80,834 ಹೊಸ ಕೋವಿಡ್ ಪ್ರಕರಗಳು ಪತ್ತೆಯಾಗಿವೆ. ಏಪ್ರಿಲ್ 2ರ ನಂತರ ದೇಶದಲ್ಲಿ ಪತ್ತೆಯಾಗಿರುವ ಕೋವಿಡ್ ಪ್ರಕರಣಗಳ ಪೈಕಿ ಇದೇ ಕಡಿಮೆ. ಇಂದಿನ ಪ್ರಕರಣಗಳು ಸೇರಿ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 2,94,39,989ಕ್ಕೆ ತಲುಪಿದೆ.

Advertisement

ದೇಶದಲ್ಲಿ ಇಂದು 1,32,062 ಮಂದಿ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಡಿಸ್ಚಾರ್ಜ್ ಆದವರ ಸಂಖ್ಯೆ 2,79,11,384ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 3,303 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.  ದೇಶದಲ್ಲಿ ಇದುವರೆಗೆ ಒಟ್ಟಾರೆ 3,70,384 ಮಂದಿ ಕೋವಿಡ್​ಗೆ ಬಲಿಯಾದಂತಾಗಿದೆ.

ದೇಶದಲ್ಲಿ ಇಲ್ಲಿಯವರೆಗೆ ಒಟ್ಟು ಸೋಂಕಿತರು: 2,94,39,989 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಹಾಗೂ ಆಸ್ಪತ್ರೆಯಿಂದ ಗುಣಮುಖರಾಗಿ 2,79,11,384 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು ಸಾವುಗಳು ಸಂಖ್ಯೆ 3,70,384 ಆಗಿದೆ.

Advertisement

Udayavani is now on Telegram. Click here to join our channel and stay updated with the latest news.

Next