Advertisement
ಕೇಂದ್ರ ಸರಕಾರದ ಅಂದಾಜಿನಂತೆ ಈ ಯೋಜನೆಯಡಿ ದೇಶದ 80 ಕೋಟಿ ಮಂದಿಗೆ ಉಚಿತ ಪಡಿತರ ಲಭಿಸಲಿದೆ. ಅಷ್ಟು ಮಾತ್ರವಲ್ಲದೆ ಈ ಯೋಜನೆಯ ಫಲಾನುಭವಿಗಳ ಆಯ್ಕೆ ಸಂಬಂಧ ಕೇಂದ್ರ ಸರಕಾರ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಸಂಬಂಧಪಟ್ಟಂತೆ ಪ್ರತ್ಯೇಕ ಮಾನದಂಡವನ್ನು ರೂಪಿಸಿದೆ.
ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಸರಕಾರ ಉಚಿತ ಪಡಿತರ ನೀಡುತ್ತಿದ್ದು ಬಡತನ ರೇಖೆಗಿಂತ ಕೆಳಗಿರುವವರ ಜತೆಯಲ್ಲಿ ಕೋವಿಡ್‌ನಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವವರನ್ನು ಸ್ಥಳೀಯ ಮಟ್ಟದಲ್ಲಿ ಗುರುತಿಸಿ, ಪರೀಶಿಲನೆ ನಡೆಸಿ ಅವರನ್ನೂ ಈ ಯೋಜನೆಯ ಫಲಾನುಭವಿಗಳ ಪಟ್ಟಿಗೆ ಸೇರ್ಪಡೆಗೊಳಿ ಸಲಾಗಿದೆ. ಇದರಿಂದಾಗಿ ಪ್ರಸಕ್ತ ವರ್ಷ ಉಚಿತ ಪಡಿತರ ಪಡೆಯಲಿರುವ ಫಲಾನುಭವಿಗಳ ಸಂಖ್ಯೆ 81.35 ಕೋಟಿಗೆ ಏರಿಕೆಯಾಗಿದೆ.
Related Articles
2022ರಲ್ಲಿ ದೇಶದ ಏಳು ರಾಜ್ಯಗಳ ವಿಧಾನ ಸಭೆಗಳಿಗೆ ಚುನಾವಣೆ ನಡೆಯಲಿದೆ. ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಗುಜರಾತ್, ಮಣಿಪುರ, ಪಂಜಾಬ್, ಹಿಮಾಚಲಪ್ರದೇಶ ವಿಧಾನ ಸಭೆಗಳಿಗೆ ಚುನಾವಣೆ ನಡೆಯಲಿದೆ. ಇದೀಗ ಕೇಂದ್ರ ಸರಕಾರ ಘೋಷಿಸಿರುವ ಉಚಿತ ಪಡಿತರ ಯೋಜನೆಯಡಿಯಲ್ಲಿ ಈ ರಾಜ್ಯಗಳಿಗೆ ಸೇರಿದ 20 ಕೋಟಿಗೂ ಅಧಿಕ ಮಂದಿಗೆ ಉಚಿತ ಪಡಿತರ ಲಭಿಸಲಿದೆ. ಸದ್ಯ ಕೋವಿಡ್‌ನ 2ನೇ ಅಲೆ ದೇಶದ ಬಹುತೇಕ ರಾಜ್ಯಗಳಲ್ಲಿ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಮತ್ತು ಇನ್ನಿತರ ಕಠಿನ ನಿರ್ಬಂಧಗಳನ್ನು ಸಡಿಲಿಸಿ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಇದರ ಹೊರತಾಗಿಯೂ ಮುಂಬರುವ ವಿಧಾನ ಸಭೆ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿ ಕೊಂಡೇ ಕೇಂದ್ರ ಸರಕಾರ ಉಚಿತ ಪಡಿತರ ಯೋಜನೆಯನ್ನು ನವೆಂಬರ್‌ವರೆಗೆ ಮುಂದುವರಿಸುವ ತೀರ್ಮಾನ ಕೈಗೊಂಡಿದೆ ಎಂದು ರಾಜಕೀಯ ವಲಯ ದಲ್ಲಿ ವಿಶ್ಲೇಷಿಸಲಾಗುತ್ತಿದೆ.
Advertisement