ರಾಜ್ಯ ಸರ್ಕಾರ, ಯೋಜನೆ ಅನುಷ್ಠಾನಗೊಳಿಸಲು 81.67 ಕೋಟಿ ರೂ. ಬಿಡುಗಡೆ ಮಾಡಿದೆ.
Advertisement
ರಾಜ್ಯದ 173 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 247 ಇಂದಿರಾ ಕ್ಯಾಂಟೀನ್ ತೆರೆದು 15 ಸಾಮಾನ್ಯ ಅಡುಗೆ ಕೋಣೆಗಳನ್ನು ನಿರ್ಮಾಣ ಪೌರಾಡಳಿತ ಇಲಾಖೆ ಮೂಲಕ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ. ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವ ಸಂಬಂಧ ಅಗತ್ಯವಿರುವ ಹಣವನ್ನು ನಗರಾಭಿವೃದಿಟಛಿ ಇಲಾಖೆಯಿಂದ ಪೌರಾಡಳಿತ ಇಲಾಖೆ ನಿರ್ದೇಶಕರಿಗೆ ಬಿಡುಗಡೆ ಮಾಡಿದ್ದು, ಈ ಹಣವನ್ನು ಇಂದಿರಾ ಕ್ಯಾಂಟೀನ್ ಬದಲಿಗೆ ಬೇರೆ ಉದ್ದೇಶಕ್ಕೆ ಬಳಸಬಾರದು ಹಾಗೂ ಇಂದಿರಾ ಕ್ಯಾಂಟೀನ್ ಅನುಷ್ಠಾನಕ್ಕೆ ಹಣ ಬಳಕೆ ಮಾಡಿರುವ ಬಗ್ಗೆ ಪ್ರಮಾಣ ಪತ್ರ ಸಲ್ಲಿಸುವಂತೆ ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ