Advertisement
ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳ ಸಹಾಯದಿಂದ ಡೆಂಗ್ಯೂ ಪ್ರಕರಣ ಹೆಚ್ಚಾಗಿ ಕಂಡುಬಂದ ಪ್ರದೇಶದಲ್ಲಿ ಫಾಗಿಂಗ್ ಮಾಡಲಾಗಿದೆ. ಡೆಂಗ್ಯೂ ಉಂಟು ಮಾಡಬಲ್ಲ ಸೊಳ್ಳೆಗಳ ಉತ್ಪತ್ತಿ ಪ್ರದೇಶ ಪತ್ತೆ ಮಾಡಿ ನಾಶ ಮಾಡಲಾಗುತ್ತಿದೆ.
ಉಡುಪಿ ನಗರ ಸಭೆ ವ್ಯಾಪ್ತಿಯ 35 ವಾರ್ಡ್ ಗಳಲ್ಲಿ ಚರಂಡಿ ಮತ್ತು ಕೆಸರು ನೀರು ನಿಲ್ಲುವ ಪ್ರದೇಶಗಳನ್ನು ಸ್ವತ್ಛಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಂಡು ಬರುವ ಗ್ರಾಮೀಣ ಮತ್ತು ಕೊಳೆಗೇರಿ ಪ್ರದೇಶಗಳನ್ನು ಪತ್ತೆ ಮಾಡಿ ಗಮನ ಹರಿಸಲಾಗುತ್ತಿದೆ. ಜನಜಾಗೃತಿ
ನಗರ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಯಕರ್ತರು ಭೇಟಿ ನೀಡಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ನಗರಸಭೆ ಪೌರಾಯುಕ್ತ ಆನಂದ ಕಲ್ಲೋಳಿಕರ್ ತಿಳಿಸಿದ್ದಾರೆ.
Related Articles
Advertisement
ಕ್ಷಿಪ್ರ ಕಾರ್ಯಪಡೆ ರಚನೆಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಜಿಲ್ಲಾ ರೋಗಗಳ ಕಣ್ಗಾವಲು ಅಧಿಕಾರಿಗಳ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ. ಆ ಮೂಲಕ ಡೆಂಗ್ಯೂ ಪ್ರಕರಣಗಳು ಹೆಚ್ಚಾಗದಂತೆ ನಿಗವಹಿಸಲಾಗುತ್ತಿದೆ. ನಿತ್ಯ ಡೆಂಗ್ಯೂ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹೇಳಿದ್ದಾರೆ.