ಬೆಂಗಳೂರು: ಕಳೆದ ಕೆಲ ತಿಂಗಳುಗಳಿಂದ ನಿಯಂತ್ರಣದಲ್ಲಿದ್ದ ಕೋವಿಡ್ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಮಂಗಳವಾರ ರಾಜ್ಯದಲ್ಲಿ 81 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿ ಇಬ್ಬರು ಬಲಿಯಾಗಿದ್ದಾರೆ.
ಬೆಂಗಳೂರು ನಗರದಲ್ಲಿ 61, ಮೈಸೂರಿನಲ್ಲಿ 5, ಬಳ್ಳಾರಿ, ಧಾರವಾಡ, ಕಲಬುರಗಿ , ಉತ್ತರ ಕನ್ನಡ, ವಿಜಯಪುರ ತಲಾ 2, ಕೋಲಾರ, ಹಾಸನ, ದಾವಣಗೆರೆ, ಬೀದರ್ ತಲಾ 1 ಸೇರಿದಂತೆ ಒಟ್ಟು ರಾಜ್ಯಾದ್ಯಂತ ಮಂಗಳವಾರ 81 ಕೋವಿಡ್ ಪ್ರಕರಣಗಳು ದಾಖಲಾಗಿವೆ.
ಬಳ್ಳಾರಿ ಹಾಗೂ ಮೈಸೂರಿನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. 79 ಕೋವಿಡ್ ಸೋಂಕಿತರು ಬಿಡುಗಡೆಯಾದರೆ, ರಾಜ್ಯದಲ್ಲಿ 518 ಸಕ್ರಿಯ ಪ್ರಕರಣಗಳು ವರದಿಯಾಗಿವೆ.
ಮಾ.12ರಂದು 69, ಮಾ.13ರಂದು 62 ಕೋವಿಡ್ ಕೇಸ್‌ಗಳು ಪತ್ತೆಯಾಗಿದ್ದವು. ಸಾರ್ವಜನಿಕರು ಈ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೆ, ಮುನ್ನೆಚ್ಚರಿಕೆ ವಹಿಸಬೇಕೆಂದು ಆರೋಗ್ಯ ಇಲಾಖೆ ತಿಳಿಸಿದೆ.