Advertisement

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 81,466 ಕೋವಿಡ್ ಕೇಸ್ ಪತ್ತೆ, 6 ತಿಂಗಳಲ್ಲಿ ಗರಿಷ್ಠ

11:33 AM Apr 02, 2021 | Team Udayavani |

ನವದೆಹಲಿ:ಕಳೆದ ಎರಡು ದಿನಗಳಿಂದ ದೇಶದಲ್ಲಿ ಇಳಿಕೆಯಾಗಿದ್ದ ಕೋವಿಡ್ ಸೋಂಕು ಮತ್ತೆ ಹೆಚ್ಚಳಗೊಂಡಿದ್ದು, ಕಳೆದ 24ಗಂಟೆಗಳಲ್ಲಿ  81,466 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ದಿನಂಪ್ರತಿ 469 ಮಂದಿ ಸಾವನ್ನಪ್ಪುತ್ತಿದ್ದು, ಇದು ಕಳೆದ 6 ತಿಂಗಳ ಗರಿಷ್ಠ ಪ್ರಮಾಣವಾಗಿದೆ ಎಂದು ಶುಕ್ರವಾರ( ಏಪ್ರಿಲ್ 02) ಕೇಂದ್ರ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಶದಲ್ಲಿ ತಿಳಿಸಿದೆ.

Advertisement

ಭಾರತದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 1.23 ಕೋಟಿಗೆ ಏರಿಕೆಯಾಗಿದೆ. ಮಹಾರಾಷ್ಟ್ರ, ಚತ್ತೀಸ್ ಗಢ, ಕರ್ನಾಟಕ, ಪಂಜಾಬ್, ಕೇರಳ, ತಮಿಳುನಾಡು, ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.

ಕಳೆದ 24ಗಂಟೆಗಳಲ್ಲಿ ಶೇ.84.61ರಷ್ಟು ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ ಎಂದು ಅಂಕಿ ಅಂಶ ಹೇಳಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ 19 ಸೋಂಕು ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇನ್ನೂ ಹೆಚ್ಚಿನ ಕಠಿಣ ನಿರ್ಬಂಧ ಜಾರಿಗೊಳಿಸಲು ಮುಂದಾಗಿದೆ. ಅಲ್ಲದೇ ಕೋವಿಡ್ ಆರ್ ಟಿ ಪಿಸಿಆರ್ ಪರೀಕ್ಷೆಯ ದರವನ್ನು ಒಂದು ಸಾವಿರದಿಂದ 500 ರೂಪಾಯಿಗೆ ಇಳಿಕೆ ಮಾಡಿದೆ. ಆ್ಯಂಟಿಜೆನ್ ಪರೀಕ್ಷೆಯ ದರವನ್ನು ಕೂಡಾ ಮಹಾರಾಷ್ಟ್ರ ಸರ್ಕಾರ ಇಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next