Advertisement
ಜಿಲ್ಲೆಯಲ್ಲಿ ಸದ್ಯ ಲಸಿಕೆ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿದ್ದರೂ ಇನ್ನೂ 3.24 ಲಕ್ಷ ಮಂದಿ ಮೊದಲನೇ ಡೋಸ್ ಲಸಿಕೆ ಪಡೆಯಲು ಬಾಕಿ ಇದ್ದಾರೆ. ಅವರ ಮನವೊಲಿಕೆ ಕೆಲಸ ಆರೋಗ್ಯ ಇಲಾಖೆಯಿಂದ ನಡೆಯುತ್ತಿದ್ದರೂ ಕೆಲವೆಡೆ ಲಸಿಕೆ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ. ಲಸಿಕೆ ಗುರಿ ತಲುಪುವುದು ಆರೋಗ್ಯ ಇಲಾಖೆಗೆ ಸವಾಲಾಗಿದ್ದು, ಇದೀಗ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
Related Articles
Advertisement
ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 470 ಹೊಸ ಪ್ರಕರಣ ಪತ್ತೆ | 368 ಸೋಂಕಿತರು ಗುಣಮುಖ
ಶೇ. 100 ಲಸಿಕೆ ಗುರಿಗೆ ಸಹಕರಿಸೋಣಇದು “ಉದಯವಾಣಿ-ಸುದಿನ’ ಕಳಕಳಿ
ಕೋವಿಡ್ ತಡೆಗಟ್ಟುವಲ್ಲಿ, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್ ನಿರೋಧಕ ಲಸಿಕೆ ಪಡೆದುಕೊಳ್ಳುವ ಮೂಲಕ ಪ್ರತಿಯೊಬ್ಬರು ತಮ್ಮ ಸಾಮಾಜಿಕ ಹೊಣೆಗಾರಿಕೆಯನ್ನು ಪ್ರದರ್ಶಿಸಬೇಕೆಂಬುದು ಉದಯವಾಣಿ-ಸುದಿನ ಕಳಕಳಿಯಾಗಿದೆ. ಲಸಿಕೆ ಪಡೆದುಕೊಳ್ಳುವುದು ಕೊರೊನಾ ನಿಯಂತ್ರಿಸುವಲ್ಲಿ ಒಂದು ರೀತಿಯಲ್ಲಿ ಶ್ರೀರಕ್ಷೆಯಾಗಿದೆ. ಜಿಲ್ಲೆಗೆ ಈಗ ಲಸಿಕೆ ಪೂರೈಕೆ ಕೂಡ ಹೆಚ್ಚಿದೆ. ವೆನ್ಲಾಕ್ ಜಿಲ್ಲಾಸ್ಪತ್ರೆ, ಹತ್ತಿರದ ಪ್ರಾ.ಆ. ಕೇಂದ್ರ, ಸ.ಆ.ಕೇಂದ್ರ, ತಾ| ಆ. ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಅಶಕ್ತರು ಆರೋಗ್ಯ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆಯಲು ಸಾಧ್ಯವಿಲ್ಲದಾಗ ಹತ್ತಿರದ ಪ್ರಾ.ಆ. ಕೇಂದ್ರಕ್ಕೆ ಮಾಹಿತಿ ನೀಡಿದರೆ ಮನೆಗೆ ಬಂದು ಲಸಿಕೆ ನೀಡಲಾಗುತ್ತಿದೆ. ಎರಡನೇ ಡೋಸ್ ಪಡೆಯಲು ಮೊಬೈಲ್‌ಗೆ ಸಂದೇಶ ಬರದಿದ್ದರೂ ಕೊವಿಶೀಲ್ಡ್ ಲಸಿಕೆ ಪಡೆದು 84 ದಿನ, ಕೊವ್ಯಾಕ್ಸಿನ್ ಲಸಿಕೆ ಪಡೆದು 28 ದಿನ ಆದವರು 2ನೇ ಡೋಸ್ ಲಸಿಕೆ ಪಡೆಯಬಹುದು. ದ.ಕ. ಜಿಲ್ಲೆಯಲ್ಲಿ ಶೇ.100ರಷ್ಟು ಲಸಿಕೆ ಗುರಿ ತಲುಪುವುದಕ್ಕೆ ಪ್ರತಿಯೊಬ್ಬರು ಸಹಕರಿಸುವ ಮೂಲಕ ಜಿಲ್ಲಾಡಳಿತದ ಜತೆಗೆ ಕೈಜೋಡಿಸಬೇಕು ಎನ್ನುವುದು ಪತ್ರಿಕೆಯ ಕಳಕಳಿಯಾಗಿದೆ. ಶಿಬಿರ ಆಯೋಜನೆ
ಸದ್ಯ ಮೊದಲ ಡೋಸ್ ಲಸಿಕೆ ಪಡೆದುಕೊಳ್ಳಲು ಕಡಿಮೆ ಸಂಖ್ಯೆಯಲ್ಲಿ ಜನರು ಬರುತ್ತಿದ್ದಾರೆ. ಇದೇ ಕಾರಣಕ್ಕೆ ಮೊದಲ ಡೋಸ್ ಲಸಿಕೆ ಪಡೆದುಕೊಳ್ಳಲು ಬಾಕಿ ಇರುವ ಎಲ್ಲರಿಗೂ ಕರೆ ಮಾಡಿ ಮಾಹಿತಿ ನೀಡಲಾಗುತ್ತಿದೆ. ಕೆಲವರಲ್ಲಿ ಲಸಿಕೆ ತೆಗೆದುಕೊಳ್ಳುವುದೇ ಇಲ್ಲ ಎಂಬ ಭಾವನೆ ಇದೆ. ಕೆಲವರು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳೋಣ ಎನ್ನುವವರು ಇದ್ದಾರೆ. ಇನ್ನು ಕೆಲವೊಬ್ಬರಿಗೆ ಅಲರ್ಜಿ ಸಹಿತ ಕೆಲವು ಕಾರಣದಿಂದಾಗಿ ಲಸಿಕೆ ತೆಗೆದುಕೊಳ್ಳುವ ಪರಿಸ್ಥಿತಿಯಲ್ಲಿಲ್ಲ. ಗ್ರಾಮೀಣ ಭಾಗದಲ್ಲಿ ಲಸಿಕೆ ಕೇಂದ್ರಗಳಿಗೆ ತೆರಳಲು ಸಾಧ್ಯವಿರದ ಕಡೆ ಹತ್ತಿರದ ಅಂಗನವಾಡಿ ಕೇಂದ್ರಗಳಲ್ಲಿ ಶಿಬಿರ ಆಯೋಜಿಸುತ್ತಿದ್ದೇವೆ.
-ಡಾ| ಕಿಶೋರ್ ಕುಮಾರ್, ದ.ಕ. ಜಿಲ್ಲಾ ಆರೋಗ್ಯಾಧಿಕಾರಿ