Advertisement

Medical: ವೈದ್ಯಕೀಯ ಕಾಲೇಜುಗಳ ಸಂಖ್ಯೆ ಶೇ.82 ಹೆಚ್ಚಳ- ಸಚಿವೆ ಭಾರತಿ ಪ್ರವೀಣ್‌ ಪವಾರ್‌

12:07 AM Dec 06, 2023 | Team Udayavani |

ಹೊಸದಿಲ್ಲಿ: 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೇರಿದ ಬಳಿಕ ದೇಶದಲ್ಲಿನ ವೈದ್ಯಕೀಯ ಕಾಲೇಜುಗಳ ಸಂಖ್ಯೆ ಶೇ.82ರಷ್ಟು ಹೆಚ್ಚಳವಾಗಿದ್ದು, ಎಂಬಿಬಿಎಸ್‌ ಸೀಟುಗಳ ಸಂಖ್ಯೆ ಶೇ.112ರಷ್ಟು ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಖಾತೆ ಸಹಾಯಕ ಸಚಿವೆ ಭಾರತಿ ಪ್ರವೀಣ್‌ ಪವಾರ್‌ ಮಂಗಳವಾರ ರಾಜ್ಯಸಭೆಗೆ ಈ ಮಾಹಿತಿ ನೀಡಿದ್ದಾರೆ. ಇದೇ ಅವಧಿಯಲ್ಲಿ ಪಿಜಿ ಮೆಡಿಕಲ್‌ ಸೀಟುಗಳ ಪ್ರಮಾಣ ಶೇ.127ರಷ್ಟು ಹೆಚ್ಚಳವಾಗಿದೆ ಎಂದೂ ತಿಳಿಸಿದ್ದಾರೆ.

Advertisement

ಇದೇ ವೇಳೆ ದೇಶದ ಪೊಲೀಸ್‌ ಪಡೆಗಳಲ್ಲಿ ಮಹಿಳೆಯರ ಪ್ರಮಾಣವನ್ನು ಕನಿಷ್ಠ ಶೇ.33ಕ್ಕೆ ಏರಿಸಬೇಕೆಂಬ ಗುರಿ ಹಾಕಿ ಕೊಂಡಿದ್ದರೂ, ಕೇವಲ ಶೇ.11.75ರಷ್ಟು ಮಾತ್ರ ಮಹಿಳೆಯರು ಪೊಲೀಸ್‌ ಪಡೆಗಳಲ್ಲಿದ್ದಾರೆ ಎಂದು ಲೋಕಸಭೆಗೆ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರಾಯ್‌ ಮಾಹಿತಿ ನೀಡಿದ್ದಾರೆ. ಇನ್ನು, ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಬಜೆಟ್‌ನಲ್ಲಿ ಘೋಷಿಸಿದ 60 ಸಾವಿರ ಕೋಟಿ ರೂ.ಗಳ ಹೊರತಾಗಿ ಹೆಚ್ಚುವರಿಯಾಗಿ 10 ಸಾವಿರ ಕೋಟಿ ರೂ.ಗಳನ್ನು ತುರ್ತು ನಿಧಿಯಿಂದ ಮುಂಗಡವಾಗಿ ಪಾವತಿಸಲಾಗಿದೆ ಎಂದು ಲೋಕಸಭೆಗೆ ಸರಕಾರ ಮಾಹಿತಿ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next