Advertisement

ಮೈಸೂರು ಜಿಲ್ಲೆಯಲ್ಲಿ ಒಂದೇ ದಿನ 83 ಪಾಸಿಟಿವ್ ಪ್ರಕರಣ ಪತ್ತೆ

11:32 PM Jul 11, 2020 | Hari Prasad |

ಮೈಸೂರು: ಜಿಲ್ಲೆಯಲ್ಲಿ ಶನಿವಾರ ಒಂದೇ ದಿನ 83 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.

Advertisement

ಮತ್ತು ಜಿಲ್ಲೆಯಲ್ಲಿ ಇಂದು ಈ ಮಹಾಮಾರಿಗೆ 8 ಮಂದಿ ಬಲಿಯಾಗಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಪ್ರಕರಣಗಳ ಸಂಖ್ಯೆ 773ಕ್ಕೆ ಏರಿಕೆಯಾಗಿದೆ. ಅದರಲ್ಲಿ ಇಂದು ಬಿಡುಗಡೆಯಾದ 22 ಮಂದಿ ಸೇರಿ 385 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ 28 ಮಂದಿ ಸಾವನ್ನಪ್ಪಿದ್ದು, 360 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 70 ವರ್ಷದ ವ್ಯಕ್ತಿ, 56 ವರ್ಷದ ಮಹಿಳೆ, 68 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಇನ್ನು ಜ್ವರ, ಕೆಮ್ಮಿನಿಂದ ಬಳಲುತ್ತಿದ್ದ 55 ವರ್ಷದ ವ್ಯಕ್ತಿ ಕೂಡಾ ಸಾವನ್ನಪ್ಪಿದ್ದಾರೆ.

ಇನ್ನು 68, 50, 71 ಹಾಗೂ 58 ವರ್ಷ ವ್ಯಕ್ತಿಗಳು ಕೂಡಾ ಕೋವಿಡ್ 19 ಸೋಂಕಿಗೆ ಬಲಿಯಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next