Advertisement
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಚಂಡಮಾರುತ ಉಂಟಾಗುವ ಬಗ್ಗೆ ಮುಂಚಿತವಾಗಿಯೇ ಮುನ್ಸೂಚನೆ ನೀಡುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರದ ನೆರವಿನೊಂದಿಗೆ ಯೋಜನೆ ಜಾರಿಗೊಳಿಸಲಾಗುತ್ತಿದೆ. ಆರು ಕಿಲೋಮೀಟರ್‌ಗಳವರೆಗೆ ಕೇಳಬಹುದಾದ ಸೈರನ್‌ಗಳನ್ನು ಸ್ಥಾಪಿಸಲಾಗುತ್ತದೆ. ಮೊದಲ ಹಂತದಲ್ಲಿ ಕರಾವಳಿ ಪ್ರದೇಶದಲ್ಲಿ 40 ಸ್ಥಳಗಳಲ್ಲಿ ಪ್ರಾರಂಭಿಸಲು ಯೋಜಿಸಲಾಗಿದ್ದು, ಶೀಘ್ರದಲ್ಲೇ ಇದನ್ನು 60 ಸ್ಥಳಗಳಿಗೆ ವಿಸ್ತರಿಸುವ ಚಿಂತನೆಯಿದೆ.
Related Articles
Advertisement
ಪ್ರವಾಹ ಪೀಡಿತ ತಾಲೂಕುಗಳ ಸಂಖ್ಯೆ ಹೆಚ್ಚಳ: ರಾಜ್ಯದಲ್ಲಿನ 83 ತಾಲ್ಲೂಕುಗಳು ಅಧಿಕೃತವಾಗಿ ಪ್ರವಾಹ ಪೀಡಿತಗೊಂಡಿವೆ. ಈ ಮೊದಲು 61 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿತ್ತು. ಆದರೆ, ಇತ್ತೀಚಿನ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ನಂತರ, ಬೆಳಗಾವಿ, ಚಿಕ್ಕಮಗಳೂರು, ಹುಬ್ಬಳ್ಳಿ ನಗರ, ಕಡೂರು, ದಾವಣಗೆರೆ, ದಾಂಡೇಲಿ, ಆಲೂರು, ಲಕ್ಷೆ¾àಶ್ವರ, ತರೀಕೆರೆ, ಮುಂಡಗೋಡು, ಸೂಪಾ, ಹುಬ್ಬಳ್ಳಿ, ಭದ್ರಾವತಿ, ಚನ್ನಗಿರಿ, ಅಣ್ಣಿಗೇರಿ, ಬಬಲೇಶ್ವರ, ನಿಡಗುಂದಿ, ಕೊಲ್ಹಾರ, ಮುದ್ದೇಬಿಹಾಳ, ಹರಪನಹಳ್ಳಿ, ಹೊಸನಗರ ಮತ್ತು ಮೂಡಿಗೆರೆ ಸೇರಿದಂತೆ 22 ತಾಲ್ಲೂಕುಗಳು ಹೆಚ್ಚುವರಿಯಾಗಿ ಸೇರ್ಪಡೆಗೊಂಡಿವೆ. ಹೀಗಾಗಿ ರಾಜ್ಯದಲ್ಲಿ 83 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಎಂದು ಪಟ್ಟಿ ಮಾಡಲಾಗಿದೆ ಎಂದು ಹೇಳಿದರು.