Advertisement

KSRTC ಸಿಬ್ಬಂದಿಗಳ 84 ಕೋಟಿ ರೂಪಾಯಿ ಪಾವತಿ

10:37 PM Mar 16, 2024 | Team Udayavani |

ಬೆಂಗಳೂರು: ಕೆಎಸ್‌ಆರ್‌ ಟಿಸಿ ಸಿಬ್ಬಂದಿಗಳ ತುಟ್ಟಿಭತ್ಯೆ ಹಿಂಬಾಕಿ, ಗಳಿಕೆ ರಜೆ ನಗದೀಕರಣ ಹಾಗೂ ಉಪಧನದ ಬಾಕಿ ಮೊತ್ತ ಒಟ್ಟು 84 ಕೋಟಿ ರೂ. ಪಾವತಿಸಲು ಆದೇಶಿಸಲಾಗಿದೆ.

Advertisement

ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ನಿರ್ದೇಶನದಂತೆ ಸಾರಿಗೆ ಇಲಾಖೆ ಈ ಆದೇಶ ಹೊರಡಿಸಿದೆ.

ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳಿಗೆ ( ಸದರಿ ಅವಧಿಯಲ್ಲಿನ ನಿವೃತ್ತ ಸಿಬ್ಬಂದಿಗಳನ್ನು ಸೇರಿ) 2022-23ರ ಮೇ ಸಾಲಿನ ಗಳಿಕೆ ರಜೆ ನಗದೀಕರಣದ ಮೊತ್ತ 24 ಕೋಟಿ ರೂ. ಹಾಗೂ ಜುಲೈ-2022 ರಿಂದ ನವೆಂಬರ್‌ -2022 ರ ಮಾಹೆಯ 5 ತಿಂಗಳು, ಜನವರಿ-2023 ರಿಂದ ಜುಲೈ-2023 ರವರೆಗಿನ 7 ತಿಂಗಳು ಮತ್ತು ಜುಲೈ-2023 ರಿಂದ ಅಕ್ಟೋಬರ್‌-2023 ರವರೆಗಿನ 4 ತಿಂಗಳುಗಳ ಹಿಂಬಾಕಿ ತುಟ್ಟಿಭತ್ಯೆ ಮೊತ್ತ 54 ಕೋಟಿ ರೂ. ಪಾವತಿಸಲು ಆದೇಶಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಹಾಗೆಯೇ ಜನವರಿ-2024 ರಲ್ಲಿ ಸಂಸ್ಥೆಯ ಸೇವೆಯಿಂದ ನಿವೃತ್ತರಾದ ಸಿಬ್ಬಂದಿಗಳ ಉಪಧನ 6 ಕೋಟಿ ರೂ. ಮೊತ್ತವನ್ನು ಕೂಡ ಸಾರಿಗೆ ಇಲಾಖೆ ಎಂಡಿ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next