Advertisement

ಜ. 6ರಿಂದ ಅಕ್ಷರ ಜಾತ್ರೆ

06:00 AM Oct 24, 2018 | Team Udayavani |

ಬೆಂಗಳೂರು: ಡಿಸೆಂಬರ್‌ 7 ರಿಂದ 9ರ ವರೆಗೆ ಧಾರವಾಡದಲ್ಲಿ ನಡೆಯಬೇಕಾಗಿದ್ದ 84ನೇ ಅಖೀಲ ಭಾರತ ಕನ್ನಡ ಸಾಹಿತ್ಯ
ಸಮ್ಮೇಳನವನ್ನು 2019ರ ಜನವರಿ 6 ರಿಂದ 8ರವರೆಗೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್‌ ಹೇಳಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು ಸಮ್ಮೇಳನದ ಪೂರ್ವಸಿದ್ಧತೆ ಕಾರ್ಯ ವಿಳಂಬವಾದ ಹಿನ್ನೆಲೆಯಲ್ಲಿ ಸಮ್ಮೇಳನವನ್ನು ಮುಂದೂ ಡುವಂತೆ ಸ್ವಾಗತ ಸಮಿತಿ ಕೇಳಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಜನವರಿ ಮೊದಲ ವಾರದಲ್ಲಿ ಸಮ್ಮೇಳನವನ್ನು ಹಮ್ಮಿಕೊಳ್ಳುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

Advertisement

ಜಿಲ್ಲಾಡಳಿತದ ತೀರ್ಮಾನಕ್ಕೆ: ಧಾರವಾಡ ಸಾಹಿತ್ಯ ಸಮ್ಮೇಳನ ಮುಂದೂಡಿರುವ ಬಗ್ಗೆ ಈಗಾಗಲೇ ಸಮ್ಮೇಳನಾಧ್ಯಕ್ಷರ ಗಮನಕ್ಕೆ ತರಲಾಗಿದ್ದು ಅವರು ಕೂಡ ಸಮ್ಮತಿ ಸೂಚಿಸಿದ್ದಾರೆ ಎಂದರು. ಸಮ್ಮೇಳನದ ಪ್ರಧಾನ ವೇದಿಕೆ ಧಾರವಾಡದ ಕರ್ನಾಟಕ ಕಾಲೇಜಿನ ಆವರಣದಲ್ಲಿ ಇರಲಿದ್ದು ಭೌತಶಾಸ್ತ್ರ ವಿಜ್ಞಾನ ಕಟ್ಟಡದಲ್ಲಿ ಪುಸ್ತಕ ಮಳಿಗೆ ಮತ್ತು ವಾಣಿಜ್ಯ ಮಳಿಗೆಗಳಿಗೆ ಸ್ಥಳವಕಾಶ ಕಲ್ಪಿಸಲಾಗಿದೆ. ಉಟೋಪಚಾರ ಎಲ್ಲಿ ನಡೆಯಬೇಕು ಎಂಬುವುದನ್ನು ಜಿಲ್ಲಾಡಳಿತಕ್ಕೆ ಬಿಡಲಾಗಿದೆ ಎಂದು ತಿಳಿಸಿದರು.

ಅವರತ್ತೂಂದು ವರ್ಷದ ಬಳಿಕ ಧಾರವಾಡದಲ್ಲಿ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು ಇದಕ್ಕಾಗಿ ಹದಿನಾರು ಸಮಿತಿಗಳನ್ನು ನೇಮಕ ಮಾಡಲಾಗಿದೆ.”ಕನ್ನಡ ಮಾಧ್ಯಮ ಎದುರಿಸುತ್ತಿರುವ ಬಿಕ್ಕಟ್ಟು’,”ಹೊರನಾಡ ಕನ್ನಡಿಗರ 
ಸಮಸೆ’,”ಸಾಲಮನ್ನಾ ಸಾಧಕ- ಬಾಧಕ’,”ಬರಗಾಲ ಮತ್ತು ವಲಸೆ’, ಸೇರಿದಂತೆ ಸುಮಾರು 20 ಗೋಷ್ಠಿಗಳನ್ನು ಆಯೋಜಿಸಲಾಗಿದೆ. “ಮಹದಾಯಿ ನದಿ ಯೋಜನೆ’, ”ನಂಜುಂಡಪ್ಪ ವರದಿ ಅನುಷ್ಠಾನದ ಸವಾಲುಗಳು’ ಕುರಿತಂತೆ ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. 

ಧಾರವಾಡ ಸಾಹಿತ್ಯ ಸಮ್ಮೇಳನಕ್ಕೆ ಸುಮಾರು ಒಂದುವರೆ ಲಕ್ಷ ಜನರು ಸೇರುವ ಸಾಧ್ಯತೆ ಇದ್ದು ಈ ಹಿನ್ನೆಲೆ ಯಲ್ಲಿ ಎಲ್ಲಾ ರೀತಿಯ ತಯಾರಿ ನಡೆದಿದೆ. ಜಿಲ್ಲಾ ಉತ್ಸುವಾರಿ ಸಚಿವರಾದ ಆರ್‌.ವಿ.ದೇಶಪಾಂಡೆ ಅವರು ಈಗಾಗಲೇ ಸಮ್ಮೇಳ ಯಶಸ್ವಿ ಕುರಿತು ಆ ಭಾಗದ ಹಿರಿಯ ಸಾಹಿತಿಗಳೊಂದಿಗೆ, ಹೋರಾಟಗಾರರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದರು. ಕಳೆದ ಬಾರಿ ಮೈಸೂರಿನಲ್ಲಿ ನಡೆದ 83ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತೆಗೆದುಕೊಳ್ಳಲಾಗಿದ್ದ ನಿರ್ಣಯಗಳಲ್ಲಿ ಶೇ.50ರಷ್ಟು
ಕಾರ್ಯಗತಗೊಂಡಿವೆ.ಇನ್ನೂ ಹಲವು ನಿರ್ಣಯಗಳು ಕಾರ್ಯಾಗತ ಗೊಳ್ಳಬೇಕಾಗಿದ್ದು ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯ ನಿರ್ವಹಿಸಲಿದೆ ಎಂದರು.

ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಅವಧಿ ವಿಸ್ತರಣೆ ಕುರಿತಂತೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ, ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಸೇರಿದಂತೆ ಮತ್ತಿತರರು
ಉಪಸ್ಥಿತರಿದ್ದರು.

Advertisement

12 ಕೋಟಿ ರೂ.ಅನುದಾನ
84ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದ ರೂಪರೇಷೆಗಳನ್ನು ಬೇಗನೆ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾ ಉತ್ಸುವಾರಿ ಸಚಿವರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಸಭೆ ನಡೆಸಲಾಗಿದ್ದು
ಸಮ್ಮೇಳನಕ್ಕಾಗಿ 12ಕೋಟಿ ರೂ.ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರೊ.ಲಿಂಗರಾಜು ಅಂಗಡಿ ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next