Advertisement

ಕಾಶ್ಮೀರದಲ್ಲಿ 2021 ರಲ್ಲಿ 85 ಉಗ್ರ ಕೃತ್ಯ ಗಳನ್ನು ಭೇದಿಸಲಾಗಿದೆ: ಡಿಜಿಪಿ

12:26 PM Mar 04, 2022 | Team Udayavani |

ಶ್ರೀನಗರ : ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೆನೇಡ್‌ಗಳು, ನಾಗರಿಕ ಹತ್ಯೆಗಳು ಮತ್ತು ಇತರ ಭಯೋತ್ಪಾದಕ ಚಟುವಟಿಕೆಗಳನ್ನು ಒಳಗೊಂಡ ಸುಮಾರು 85 ಭಯೋತ್ಪಾದಕ ಕೃತ್ಯಗಳನ್ನು ಭೇದಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಗುರುವಾರ ಹೇಳಿದ್ದಾರೆ.

Advertisement

ಜಮ್ಮುವಿನಲ್ಲಿ ಐಇಡಿ (ಸುಧಾರಿತ ಸ್ಫೋಟಕ ಸಾಧನಗಳು) ನೆಡುವ ಮೂಲಕ ಗೊಂದಲವನ್ನು ಸೃಷ್ಟಿಸುವ ಭಯೋತ್ಪಾದಕರ ಪ್ರಯತ್ನಗಳನ್ನು ಇತ್ತೀಚೆಗೆ ವಿಫಲಗೊಳಿಸಲಾಗಿದೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಸ್ಫೋಟಕಗಳು, ಗ್ರೆನೇಡ್ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕ್ರಿಕೆಟ್ ಪಂದ್ಯಾವಳಿಯ ಸಂದರ್ಭದಲ್ಲಿ ಸಿಂಗ್ ಹೇಳಿದ್ದಾರೆ.

ಜಮ್ಮುವಿನಲ್ಲಿ ಗಲಭೆ ಸೃಷ್ಟಿಸಲು ಪಾಕಿಸ್ಥಾನ ಪದೇ ಪದೇ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಸಿಂಗ್, ಪೊಲೀಸರು ಮತ್ತು ಇತರ ಭದ್ರತಾ ಪಡೆಗಳು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿವೆ ಮತ್ತು ವಿಫಲಗೊಳಿಸುತ್ತಿವೆ ಎಂದು ಹೇಳಿದರು.

ಜನರ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದ ಅವರು, ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದ ಯುವಕರಿಂದಾಗಿ ತಮ್ಮ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ಹೇಳಿದರು.

ಶಾಂತಿ ಮತ್ತು ಪ್ರೀತಿಯ ಸಂದೇಶವನ್ನು ಸಾರಲು ಯುವ ಪೀಳಿಗೆ ಮುಂದೆ ಬರುವ ಸಮಯ ಬಂದಿದೆ ಎಂದರು.

Advertisement

ಕುಲ್ಗಾಮ್‌ನಲ್ಲಿ ನಾಗರಿಕನೊಬ್ಬನ ಹತ್ಯೆಯನ್ನು ಉಲ್ಲೇಖಿಸಿದ ಡಿಜಿಪಿ, ಭಯೋತ್ಪಾದಕರು ಮತ್ತು ಅವರ ನಾಯಕರ ಕಡೆಯಿಂದ ಇದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು.

ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸುವ ತಂಡಗಳನ್ನು ಶಾಂತಿಯ ರಾಯಭಾರಿಗಳೆಂದು ಕರೆದ ಸಿಂಗ್, ಕ್ರೀಡೆಯು ಶಾಂತಿ, ಸಹಿಷ್ಣುತೆ ಮತ್ತು ತಿಳುವಳಿಕೆಯನ್ನು ಉತ್ತೇಜಿಸುವ ಸಾಧನವಾಗಿದೆ ಮತ್ತು ಇದು ಸಂಸ್ಕೃತಿಗಳು ಮತ್ತು ಪ್ರದೇಶಗಳಾದ್ಯಂತ ಜನರನ್ನು ಒಟ್ಟಿಗೆ ತರುತ್ತದೆ ಎಂದು ಹೇಳಿದರು.

ಸಾಮಾಜಿಕ ಒಗ್ಗಟ್ಟನ್ನು ಇನ್ನಷ್ಟು ಬಲಪಡಿಸಲು ಕ್ರೀಡೆಗಳನ್ನು ಬಳಸಿಕೊಳ್ಳಬಹುದು. ಇದು ಸಮಾನತೆಯನ್ನು ಉತ್ತೇಜಿಸುತ್ತದೆ ಮತ್ತು ವೈವಿಧ್ಯತೆಯ ಮೌಲ್ಯಗಳನ್ನು ಉತ್ತೇಜಿಸಲು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next