Advertisement
ರಾಜ್ಯದ ಉನ್ನತ ಶಿಕ್ಷಣ ವಿಭಾಗದಲ್ಲಿರುವ 8,500 ತರಗತಿ ಕೊಠಡಿಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸ್ಮಾರ್ಟ್‌ಕ್ಲಾಸ್ ರೂಂಗಳನ್ನಾಗಿ ಪರಿವರ್ತಿಸಲಾಗುತ್ತಿದ್ದು, ಈ ಪೈಕಿ 2,500 ಕೊಠಡಿಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ ಎಂದರು.ಮಲ್ಲೇಶ್ವರದ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಶನಿವಾರ ಉಚಿತ ಟ್ಯಾಬ್ಲೆಟ್-ಪಿಸಿಗಳನ್ನು ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಡಿಜಿಟಲ್ ಕಲಿಕೆಗೆ ಪೂರಕವಾಗುವಂತೆ ಕಳೆದ ಶೈಕ್ಷಣಿಕ ವರ್ಷದಲ್ಲಿ 1.10 ಲಕ್ಷ ಲ್ಯಾಪ್‌ಟಾಪ್‌ಗ್ಳನ್ನು ಪದವಿ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ. ಇದಕ್ಕಾಗಿ 330 ಕೋ. ರೂ. ಖರ್ಚು ಮಾಡಲಾಗಿತ್ತು. ಈ ಶೈಕ್ಷಣಿಕ ವರ್ಷದಲ್ಲಿ 1.60 ಲಕ್ಷದಷ್ಟು ಎಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸಲಾಗುತ್ತಿದೆ ಎಂದರು.
Related Articles
Advertisement