Advertisement

ಮೈಸೂರು ವಿಭಾಗಕ್ಕೆ 8,600 ಕೋಟಿ ರೂ. ಸಾಲ

01:36 PM Oct 03, 2020 | Suhan S |

ಮೈಸೂರು: ವಿವಿಧ ಸಹಕಾರ ಕ್ಷೇತ್ರಗಳ ಮೈಸೂರು ವಿಭಾಗದ ಸುಮಾರು 8,600 ಕೋಟಿ ರೂ. ಸಾಲ ನೀಡಲು ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ ಯೋಜನೆ ರೂಪಿಸಲಾಗಿದೆ ಎಂದು ಸಹಕಾರ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

Advertisement

ನಗರದ ಕಲಾ ಮಂದಿರದಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಆರ್ಥಿಕ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋವಿಡ್‌ 19ರ ಸಂದರ್ಭದಲ್ಲಿಆರ್ಥಿಕ ಸ್ಪಂದನ ಕಾರ್ಯಕ್ರಮ ಮಾಡಬೇಕು ಎಂಬುದು ಮುಖ್ಯಮಂತ್ರಿಗಳ ಉದ್ದೇಶವಾಗಿದೆ.ಈಗಾಗಲೇ ಬೆಂಗಳೂರು ವಿಭಾಗಕ್ಕೆ ಚಾಲನೆ ನೀಡಲಾಗಿದೆ ಎಂದರು.

ಆತ್ಮನಿರ್ಭರ ಯೋಜನೆ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಯಡಿ 39,300 ಕೋಟಿ ರೂ. ಹಣವನ್ನು ಆರ್ಥಿಕ ಸ್ಪಂದನದ ಮೂಲಕ ರೈತರು, ವ್ಯಾಪಾರಸ್ಥರು, ಸ್ವಸಹಾಯ ಸಂಘಗಳು, ಹಾಲು ಉತ್ಪಾದಕ ಸಂಘಗಳು, ಸಣ್ಣ-ದೊಡ್ಡ ಉದ್ದಿಮೆಗಳಿಗೆ ಸಾಲ ನೀಡಲಾಗುತ್ತಿದೆ. ಇದೊಂದು ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿದೆ ಎಂದರು.

ಸಾಲ ಮರುಪಾವತಿಸಿ: ನಾವುಕೊಟ್ಟ ಸಾಲವನ್ನು ಯಾವ ರೀತಿ ಸದ್ಬಳಕೆಯಾಗುತ್ತದೆ ಎಂಬ ಬಗ್ಗೆ ಗಮನಹರಿಸುತ್ತೇವೆ. ಯಾವುದೇ ಕಾರಣಕ್ಕೂಸಾಲ ದುರ್ಬಳಕೆಯಾಗಕೂಡದು. ಈ ನಿಟ್ಟಿನಲ್ಲಿ  ಯೋಜನೆ ರೂಪಿಸಲಾಗಿದೆ. ಸಾಲವನ್ನು ಎಲ್ಲರೂ ಪ್ರಾಮಾಣಿಕವಾಗಿ ಬಳಸಿ, ಮರುಪಾವತಿಸಿ ಯೋಜನೆಯನ್ನು ಯಶಸ್ವಿಗೊಳಿಸಿ ಎಂದು ಸಲಹೆ ನೀಡಿದರು.

ಸಾಕ್ಷ್ಯಚಿತ್ರ ಪ್ರದರ್ಶನ: ಆತ್ಮನಿರ್ಭರ ಯೋಜನೆಯಡಿ ಹಮ್ಮಿಕೊಳ್ಳಲಾಗಿರುವ ಆರ್ಥಿಕ ಸ್ಪಂದನ ‌ ಕಾರ್ಯಕ್ರಮದ ಪ್ರಯುಕ್ತ ಸಹಕಾರ ಪತ್ರಿಕೆ ಹೊರತಂದ ವಿಶೇಷ ಸಂಚಿಕೆಯನ್ನು ಅನಾವರಣಗೊಳಿಸಲಾಯಿತು. ಬಳಿಕ ಸಹಕಾರ ಕ್ಷೇತ್ರ ನಡೆದುಬಂದ ಹಾದಿ ಬಗ್ಗೆ ಕಿರು ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಲಾಯಿತು.

Advertisement

ಫ‌ಲಾನುಭವಿಗಳಿಗೆ ಚೆಕ್‌ ವಿತರಣೆ: ರೈತರು, ಸ್ವಸಹಾಯ ಸಂಘಗಳು, ಸಣ್ಣ ಉದ್ದಿಮೆಗಳು, ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳ ಮೈಸೂರು ವಿಭಾಗದ8ಜಿಲ್ಲೆಗಳ ಫ‌ಲಾನುಭವಿಗಳಿಗೆ ಸಾಲದ ಚೆಕ್‌ ವಿತರಿಸಲಾಯಿತು.

ವೇದಿಕೆಯಲ್ಲಿ ಶಾಸಕ ಎಲ್‌. ನಾಗೇಂದ್ರ, ಎಚ್‌.ವಿ.ರಾಜೀವ್‌, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡ,ಸಹಕಾರಇಲಾಖೆಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌, ಸಹಕಾರ ಸಂಘಗಳ ನಿಬಂಧಕ ಎಸ್‌.ಜಿಯಾವುಲ್ಲ, ಮೇಯರ್‌ ತಸ್ನಿಂ ಇತರರಿದ್ದರು.

ಅನೇಕ ಸುಧಾರಣೆ ಕ್ರಮ :  ಕೋವಿಡ್‌ 19ರ ಸಂದರ್ಭದಲ್ಲಿ ರಾಜ್ಯ ಪ್ರವಾಸ ಮಾಡಿದ ಸಹಕಾರ ಸಚಿವ ಎಸ್‌. ಟಿ.ಸೋಮಶೇಖರ್‌, ಇಲಾಖೆ ವ್ಯಾಪ್ತಿಯಲ್ಲಿ ಅನೇಕ ಸುಧಾರಣೆ ಕ್ರಮ ತಂದಿದ್ದಾರೆ. ಕೋವಿಡ್‌ ನಿರ್ವಹಣೆಗೋಸ್ಕರ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ53ಕೋಟಿ ರೂ. ದೇಣಿಗೆಯನ್ನು ಸಹಕಾರಿಗಳಿಂದ ಸಂಗ್ರಹಿಸಿದ್ದಾರೆ. ಈಗ ಸಂಕಷ್ಟದಲ್ಲಿರುವ ಎಲ್ಲ ತರಹದ ರೈತರಿಗೆ,ಕೂಲಿ ಕಾರ್ಮಿಕರಿಗೆ,ವ್ಯಾಪಾರಸ್ಥರಿಗೆ ಸಾಲ ನೀಡುತ್ತಿರುವುದು ಉತ್ತಮ ಕಾರ್ಯ ಎಂದು ಶಾಸಕ ಜಿ.ಟಿ.ದೇವೇಗೌಡ ಶ್ಲಾಘಿಸಿದರು.

ಸ್ವಾವಲಂಬಿಜೀವನ :  ಪಟ್ಟಣ, ಗ್ರಾಮೀಣ ಭಾಗಗಳ ಜನತೆಗೆ ಆರ್ಥಿಕ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಹಾಗೂ ರೈತರಿಗೆ ಸಾಲ ನೀಡುವ ಸಲುವಾಗಿ ಆತ್ಮನಿರ್ಭರ ಭಾರತ ಯೋಜನೆ ಸಹಕಾರಿಯಾಗಿದೆ. ಇದರ ಮೂಲಕ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಿ ಎಂದು ಶಾಸಕ ಎಸ್‌.ಎ. ರಾಮದಾಸ್‌ ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next