ನವದೆಹಲಿ: ಭಾರತದಲ್ಲಿ ಕೋವಿಡ್ ಎರಡನೇ ಡೋಸ್ ಲಸಿಕೆ ನೀಡಿದ ನಂತರ 87,000ಕ್ಕೂ ಅಧಿಕ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ಶೇ.46ರಷ್ಟು ಕೇರಳ ರಾಜ್ಯದಲ್ಲಿ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಉನ್ನತ ಮೂಲಗಳು ತಿಳಿಸಿರುವುದಾಗಿ ಎನ್ ಡಿಟಿವಿ ವರದಿ ಮಾಡಿದೆ.
ಇದನ್ನೂ ಓದಿ:3ನೇ ಅಲೆ ನಿರ್ವಹಣೆ ಹೇಗೆ? ಕೋವಿಡ್ ಕೇರ್ ಸೆಂಟರ್‌ನಲ್ಲಿ ಕಳಪೆ ಆಹಾರ
ಮೊದಲ ಹಂತದ ಕೋವಿಡ್ ಲಸಿಕೆ ನೀಡಿಕೆ ನಂತರ ಕೇರಳದಲ್ಲಿ ಸುಮಾರು 80,000 ಕೋವಿಡ್ ಪ್ರಕರಣಗಳು ವರದಿಯಾಗಿತ್ತು. ಅಲ್ಲದೇ ಎರಡನೇ ಡೋಸ್ ಪಡೆದ ನಂತರ 40,000 ಮಂದಿ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೇರಳ ರಾಜ್ಯದಲ್ಲಿನ ಸೋಂಕು ಪ್ರಕರಣಗಳ ಹೆಚ್ಚಳದ ಪರಿಣಾಮ ದೇಶದಲ್ಲಿ ಪ್ರತಿದಿನದ ಸೋಂಕು ಪ್ರಕರಣ ಏರಿಕೆಯಾಗುತ್ತಿದ್ದು, ಇದು ಕಳವಳಕಾರಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಜೆನೊಮಿಕ್ ಮೂಲಕ ಸೋಂಕಿಗೆ ಒಳಗಾದ ಸುಮಾರು 200 ಮಂದಿಯ ಸ್ಯಾಂಪಲ್ಸ್ ಪರೀಕ್ಷೆಗೊಳಪಡಿಸಲಾಗಿದ್ದು, ಇದರಲ್ಲಿ ಈವರೆಗೆ ಯಾವುದೇ ರೂಪಾಂತರಿ ಸೋಂಕು ಪತ್ತೆಯಾಗಿಲ್ಲ ಎಂದು ವರದಿ ವಿವರಿಸಿದೆ.
ದೇಶದಲ್ಲಿ ಎರಡನೇ ಅಲೆ ಇಳಿಕೆಯಾಗುತ್ತಿದ್ದು, ಈ ಸಂರ್ಭದಲ್ಲಿ ಹೊಸ ರೂಪಾಂತರಿ ಸೋಂಕಿನ ಬಗ್ಗೆ ಹೆಚ್ಚಿನ ಎಚ್ಚರ ವಹಿಸಬೇಕಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮುನ್ಸೂಚನೆ ನೀಡಿದೆ. ಕೇರಳದ ವಯನಾಡಿನಲ್ಲಿ ಶೇ.100ರಷ್ಟು ಲಸಿಕೆ ನೀಡಲಾಗಿದ್ದರೂ ಕೂಡಾ ಕೋವಿಡ್ ಪ್ರಕರಣ ವರದಿಯಾಗುತ್ತಿದೆ ಎಂದು ತಿಳಿಸಿದೆ.