Advertisement

ರೈತರ ಸಾಲ ಮನ್ನಾಗೆ 876 ಕೋಟಿ ಬಿಡುಗಡೆ

01:30 AM Jan 29, 2019 | Team Udayavani |

ಬೆಂಗಳೂರು: ರೈತರ ಸಾಲ ಮನ್ನಾಗೆ ಸಂಬಂಧಿಸಿದಂತೆ ಜ. 28 ರವರೆಗೆ 876 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದುವರೆಗೂ ವಾಣಿಜ್ಯ ಬ್ಯಾಂಕ್‌ ಹಾಗೂ ಸಹಕಾರ ಬ್ಯಾಂಕುಗಳಲ್ಲಿ ಒಟ್ಟು 2.9 ಲಕ್ಷ ಸಾಲ ಖಾತೆಗಳಿಗೆ 1440 ಕೋಟಿ ರೂ. ಬಿಡುಗಡೆ ಮಾಡಿದಂತಾಗಿದೆ ಎಂದು ಮುಖ್ಯಮಂತ್ರಿಯವರ ಕಚೇರಿ ಪ್ರಕಟಣೆ ತಿಳಿಸಿದೆ. ಜ. 28 ರವರೆಗೆ ಸಹಕಾರಿ ಬ್ಯಾಂಕುಗಳ 1.4 ಲಕ್ಷ ಸಾಲ ಖಾತೆಗಳಿಗೆ 768 ಕೋಟಿ ರೂ. ಹಾಗೂ ವಾಣಿಜ್ಯ ಬ್ಯಾಂಕ್‌ಳಲ್ಲಿ 15,125 ಸಾಲ ಖಾತೆಗಳಿಗೆ 672.5 ಕೋಟಿ ರೂ. ಬೆಳೆಸಾಲ ಮನ್ನಾ ಮೊತ್ತ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next