ನವದೆಹಲಿ: ಪ್ರಸ್ತುತ ದೇಶದಲ್ಲಿ ಆರಂಭವಾಗಿರುವ ಕೋವಿಡ್ ಎರಡನೇ ಅಲೆ ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದು, ಕಳೆದ 24ಗಂಟೆಗಳಲ್ಲಿ 89,129 ಕೋವಿಡ್ ಸೋಂಕು ಪತ್ತೆಯಾಗಿದೆ. ಇದು ಕಳೆದ ಸೆಪ್ಟೆಂಬರ್ ತಿಂಗಳ ಗರಿಷ್ಠ ಪ್ರಮಾಣದ್ದಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ನಮಗೆ ಬೇರೆ ದಾರಿಯಿಲ್ಲ, ಕೋವಿಡ್ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಯಿಲ್ಲ: ಸುಧಾಕರ್
ಕಳೆದ ಸೆಪ್ಟೆಂಬರ್ ನಲ್ಲಿ 95,605 ಕೋವಿಡ್ ಪ್ರಕರಣ ವರದಿಯಾಗಿತ್ತು. ಅಲ್ಲದೇ ಕರ್ನಾಟಕ, ಮಹಾರಾಷ್ಟ್ರ, ಪಂಜಾಬ್, ಕೇರಳ, ಚತ್ತೀಸ್ ಗಢ್, ಚಂಡೀಗಢ್, ಗುಜರಾತ್, ಮಧ್ಯಪ್ರದೇಶ, ತಮಿಳುನಾಡು, ದೆಹಲಿ ಮತ್ತು ಹರ್ಯಾಣದಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವುದು ಕಳವಳಕಾರಿಯಾಗಿದೆ ಎಂದು ವರದಿ ಹೇಳಿದೆ.
ಮಹಾರಾಷ್ಟ್ರದಲ್ಲಿ ಈವರೆಗೆ ಅತೀ ಹೆಚ್ಚು ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಶುಕ್ರವಾರ ಮಹಾರಾಷ್ಟ್ರದಲ್ಲಿ 47,827 ಕೋವಿಡ್ ಪ್ರಕರಣ ಪತ್ತೆಯಾಗಿತ್ತು. ವಾಣಿಜ್ಯ ನಗರಿ ಮುಂಬೈನಲ್ಲಿ ಕಳೆದ 24 ಗಂಟೆಯಲ್ಲಿ 8,648 ಪ್ರಕರಣ ವರದಿಯಾಗಿದೆ.