Advertisement

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

11:53 PM Nov 22, 2024 | Team Udayavani |

ನವದೆಹಲಿ: 8ನೇ ವೇತನ ಆಯೋಗದ ಶಿಫಾರಸು ಜಾರಿಯಾದರೆ ಕೇಂದ್ರ ಸರ್ಕಾರಿ ನೌಕರರ ಕನಿಷ್ಠ ವೇತನ 51,480 ರೂ.ಗಳಿಗೆ ಏರಿಕೆಯಾಗಲಿದೆ. ಪ್ರಸ್ತುತ ಪಡೆಯುತ್ತಿರುವ ವೇತನದಲ್ಲಿ ಶೇ.186ರಷ್ಟು ಏರಿಕೆಯಾಗಲಿದ್ದು, ಮುಂದಿನ ವರ್ಷ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.

Advertisement

7ನೇ ವೇತನ ಆಯೋಗದ ಶಿಫಾರಸಿನ ಪ್ರಕಾರ ಕೇಂದ್ರ ಸರ್ಕಾರಿ ನೌಕರರ ಕನಿಷ್ಠ ವೇತನ 18,000 ರೂ. ಇದೆ. ಫಿಟ್‌ಮೆಂಟ್‌ ಫ್ಯಾಕ್ಟರನ್ನು (ವೇತನ ಲೆಕ್ಕಮಾಡಲು ಬಳಸುವ ಗುಣಕ) ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಪ್ರಸ್ತುತ 2.57 ಇರುವ ಇದನ್ನು 2.86ಕ್ಕೆ ಹೆಚ್ಚಳ ಮಾಡಲು ಶಿಫಾರಸು ಮಾಡಲಾಗಿದೆ. ಅದೇ ರೀತಿ ಪಿಂಚಣಿಯೂ ಸಹ 9,000ರೂ.ನಿಂದ 25,740 ರೂ.ಗೆ ಏರಿಕೆಯಾಗಲಿದೆ ಎಂದು ವರದಿಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next