Advertisement
ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟಿರುವ ಒಟ್ಟು 140 ಪ್ರಕರಣಗಳಲ್ಲಿ ಪ್ರಸ್ತುತ 131 ಪ್ರಕರಣಗಳು ಸಕ್ರಿಯವಾಗಿ ಉಳಿದಿವೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.
Related Articles
Advertisement
ಕ್ವಾರಂಟೈನ್ ಕೇಂದ್ರಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಗಳಂತೆ ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಿದ ದಿನಾಂಕ ಮತ್ತು ಮುಂಬೈನಿಂದ ಆಗಮಿಸಿದವರ ಮಾದರಿಗಳ ಸಂಗ್ರಹಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ.
ನೆಗೆಟಿವ್ ವರದಿ ಬಂದ ನಂತರ ಬಿಡುಗಡೆ ಮಾಡಿ, ಮನೆಯಲ್ಲಿ ಕೆಲ ದಿನ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ ಎಂದರು.
ಕ್ವಾರಂಟೈನ್ ಕೇಂದ್ರದಲ್ಲಿ 14 ದಿನ ಮುಗಿದರೂ ವರದಿ ಬರುವವರೆಗೂ ಕಾಯಬೇಕು. ಇಲ್ಲವಾದಲ್ಲಿ ಜಿಲ್ಲಾಡಳಿತದ ಪ್ರಯತ್ನ ವ್ಯರ್ಥವಾಗುತ್ತದೆ. ಈ ನಿಟ್ಟಿನಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿರುವವರ ಜೊತೆಗೆ ಕೋವಿಡ್ ಮುಕ್ತ ಜಿಲ್ಲೆಯನ್ನಾಗಿಸುವ ಪ್ರಯತ್ನದಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಮನವಿ ಮಾಡಿದರು.
ಸಾರ್ವಜನಿಕರು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ ಎಂದೂ ಜಿಲ್ಲಾಧಿಕಾರಿಯವರು ಇದೇ ಸಂದರ್ಭದಲ್ಲಿ ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪ, ಡಾ. ಶಂಕರಗೌಡ ಐರೆಡ್ಡಿ, ಐಎಂಎ ಜಿಲ್ಲಾ ಕಾರ್ಯದರ್ಶಿ ವಿರೇಶ ಜಾಕಾ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.